ಅಗಸ್ತ್ಯ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ‘ಮಾರಿಗೆ ದಾರಿ’ ಸಿನಿಮಾದ ಟೀಸರ್ ಬಿಡುಗಡೆಗೊಂಡಿದೆ.

ಸಿನಿಮಾದಲ್ಲಿ ನಾಯಕರಾಗಿಯೂ ಅಗಸ್ತ್ಯ ನಟಿಸಿದ್ದು, ರಾಧ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ರಾಧ ಬಂಡವಾಳ ಹೂಡಿದ್ದಾರೆ. ಚೇತನ್ಚಂದ್ರ ಮತ್ತು ಸತೀಶ್ ಕೃಷ್ಣ ಶೆಟ್ಟಿ ನಿರ್ಮಾಣದಲ್ಲಿ ಜೊತೆಯಾಗಿದ್ದಾರೆ. ‘ಲಕ್ಷೀ ನಿವಾಸ’ ಧಾರಾವಾಹಿಯಲ್ಲಿ ನಟಿಸುತ್ತಿರುವ ಮಹಾಲಕ್ಷ್ಮಿ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಕಾಕ್ರೋಚ್ ಸುಧಿ, ಬಲ ರಾಜವಾಡಿ, ಬೆನಕ ನಂಜಪ್ಪ, ವರ್ಧನ್, ಪ್ರದೀಪ್ ಪೂಜಾರಿ, ಅನಂತಕುಮಾರ್, ತಾರಕ ರಾಮ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಕಿನ್ನಾಳ ರಾಜ್, ಪ್ರಮೋದ್ ಮರವಂತೆ, ತ್ರಿಲೋಕ ತ್ರಿವಿಕ್ರಮ ಸಾಹಿತ್ಯದ ನಾಲ್ಕು ಗೀತೆಗಳು ಸಿನಿಮಾದಲ್ಲಿವೆ. ರಿಯೋ ಆಂಟೋನಿ ಸಂಗೀತ ಸಂಯೋಜನೆ, ಜಗದೀಶ್ ಗೌಡ ಛಾಯಾಚಿತ್ರಗ್ರಹಣ ಮತ್ತು ಸಂಕಲನ, ಸೈಕ್ ಸೂರಿ ಸಾಹಸ ನಿರ್ದೇಶನ ಚಿತ್ರಕ್ಕಿದೆ. ವಾರಾಣಸಿ, ಬೆಂಗಳೂರು ಮುಂತಾದೆಡೆ ಚಿತ್ರೀಕರಣ ನಡೆದಿದ್ದು, ಸದ್ಯದಲ್ಲೇ ಸಿನಿಮಾ ಸೆನ್ಸಾರ್ ಅಂಗಳಕ್ಕೆ ಕಾಲಿಡಲಿದೆ. v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-2020440121

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.