ಎಸ್. ನಾರಾಯಣ್ ನಿರ್ದೇಶನದಲ್ಲಿ ದುನಿಯಾ ವಿಜಯ್, ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮಾರುತ ಅಕ್ಟೋಬರ್ 31ರಂದು ತೆರೆಗೆ ಬರಲಿದೆ.

ಕೆ.ಮಂಜು, ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ. ಶ್ರೇಯಸ್ ಮಂಜುಗೆ ಬೃಂದಾ ಆಚಾರ್ಯ ಜೋಡಿಯಾಗಿದ್ದಾರೆ. ಸಾಧು ಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ, ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಮುಂತಾದವರ ತಾರಾಬಳಗವಿರುವ ಈ ಚಿತ್ರದ ವಿಶೇಷ ಪಾತ್ರದಲ್ಲಿ ವಿ.ರವಿಚಂದ್ರನ್ ನಟಿಸಿದ್ದಾರೆ.

‘ವೀಕ್ಷಕರಿಗೆ ಬೇಕಾಗಿರುವ ಎಲ್ಲಾ ಅಂಶಗಳನ್ನೊಳಗೊಂಡ ಕೌಟುಂಬಿಕ ಚಿತ್ರವಿದು. ಯುವಜನತೆಗೆ ಎಚ್ಚರಿಕೆ ನೀಡುವ ಉತ್ತಮ ಸಂದೇಶ ಕೂಡ ಇದೆ. ಸಾಮಾಜಿಕ ಜಾಲತಾಣಗಳಿಂದ ಎಷ್ಟು ಉಪಯೋಗವಿದೆಯೋ, ಅದಕ್ಕಿಂತ ಹೆಚ್ಚು ಅಪಾಯವಿದೆ. ಈ ನಿಟ್ಟಿನಲ್ಲಿ ಪೋಷಕರು ಯುವಜನತೆಯ ಮೇಲೆ ಹೆಚ್ಚು ಗಮನ ನೀಡಬೇಕು ಎಂಬ ಸಂದೇಶವಿದೆ. ನಮ್ಮ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಕೂಡ ಶ್ಲಾಘಿಸಿದೆ’ ಎಂದು ನಿರ್ದೇಶಕ ಎಸ್. ನಾರಾಯಣ್ ತಿಳಿಸಿದರು.

ಎಸ್.ನಾರಾಯಣ್ ಹಾಗೂ ಜೆಸ್ಸಿ ಗಿಫ್ಟ್ ಸಂಗೀತ ನೀಡಿದ್ದು, ಪಿ.ಕೆ.ಎಚ್ ದಾಸ್ ಛಾಯಾಚಿತ್ರಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.