ಸೋಮವಾರ, ಜನವರಿ 17, 2022
18 °C

800ಕ್ಕೂ ಅಧಿಕ ಸ್ಕ್ರೀನ್ಸ್‌ಗೆ ಮದಗಜ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರೋರಿಂಗ್‌ ಸ್ಟಾರ್‌ ಶ್ರೀಮುರಳಿ ನಟನೆಯ, ಎಸ್‌.ಮಹೇಶ್‌ ಕುಮಾರ್‌ ನಿರ್ದೇಶನದ ‘ಮದಗಜ’ ಇಂದು ರಾಜ್ಯದ ಸುಮಾರು 600 ಚಿತ್ರಮಂದಿರಗಳಲ್ಲಿ 800ಕ್ಕೂ ಅಧಿಕ ಸ್ಕ್ರೀನ್‌ಗಳಿಗೆ ಲಗ್ಗೆ ಇಡುತ್ತಿದೆ.

ಎರಡನೇ ಅಲೆಯ ಲಾಕ್‌ಡೌನ್‌ ನಂತರ ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಪ್ರೇಕ್ಷಕರ ಪ್ರವೇಶಕ್ಕೆ ಅನುಮತಿ ನೀಡಿದ ಬಳಿಕ ಇಷ್ಟೊಂದು ಚಿತ್ರಮಂದಿರಗಳಲ್ಲಿ ಇದೇ ಮೊದಲ ಬಾರಿಗೆ ಬಿಗ್‌ಬಜೆಟ್‌ ಚಿತ್ರವೊಂದು ತೆರೆಕಾಣುತ್ತಿದೆ. ‘ಇದು ಚಿತ್ರರಂಗಕ್ಕೆ ಸಕಾರಾತ್ಮಕ ಸುದ್ದಿ. ಚಿತ್ರಮಂದಿರಗಳ ಸಂಖ್ಯೆ ಶುಕ್ರವಾರಕ್ಕೆ ಮತ್ತಷ್ಟು ಹೆಚ್ಚಲಿದೆ’ ಎನ್ನುತ್ತಾರೆ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ. ಶ್ರೀಮುರಳಿ ಅವರಿಗೆ ಜೋಡಿಯಾಗಿ ಆಶಿಕಾ ರಂಗನಾಥ್‌ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳು ಹಾಗೂ ತೆಲುಗಿನಲ್ಲೂ ಈ ಚಿತ್ರ ಡಿ.10ಕ್ಕೆ ತೆರೆಕಾಣಲಿದೆ. 

ತೆಲುಗಿನ ಖ್ಯಾತ ನಟ ಜಗಪತಿ ಬಾಬು, ಗರುಡಾ ರಾಮ್‌, ರಂಗಾಯಣ ರಘು, ಚಿಕ್ಕಣ್ಣ, ಶಿವರಾಜ್‌ ಕೆ.ಆರ್‌.ಪೇಟೆ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು