‘ದೂರುದಾರೆ ಹಾಗೂ ಆರೋಪಿಯ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದೆ. ಇಬ್ಬರ ವಾಟ್ಸ್ಆ್ಯಪ್ ಚಾಟ್ನಲ್ಲಿ ಯಾವುದೇ ಅಶ್ಲೀಲ ಫೋಟೊ, ವಿಡಿಯೊ ಪತ್ತೆಯಾಗಿಲ್ಲ. ಎರಡೂ ಮೊಬೈಲ್‌ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ(ಎಫ್‌ಎಸ್‌ಎಲ್) ರವಾನೆ ಮಾಡಲಾಗಿದೆ. ದತ್ತಾಂಶ ಮರು ಸಂಗ್ರಹಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೊ ಹಾಗೂ ಫೋಟೊಗಳು ಪತ್ತೆಯಾದಲ್ಲಿ ಆರೋಪಿಯನ್ನು ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.