ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೈನಾಮಿಕ್ ಪ್ರಿನ್ಸ್‌ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಪೋಸ್ಟರ್‌

Last Updated 3 ಜುಲೈ 2022, 12:59 IST
ಅಕ್ಷರ ಗಾತ್ರ

ನಟ ಪ್ರಜ್ವಲ್‌ ದೇವರಾಜ್‌ ಅವರ ಹುಟ್ಟುಹಬ್ಬ ಜುಲೈ 4ರಂದು ಇದೆ. ಅದಕ್ಕೆ ಅವರು ಅಭಿನಯಿಸುತ್ತಿರುವ ‘ಮಾಫಿಯಾ’ ಚಿತ್ರತಂಡ ವಿಶೇಷ ಪೋಸ್ಟರ್‌ ಬಿಡುಗಡೆ ಮಾಡಿ ಶುಭಾಶಯ ಹೇಳಿದೆ.

ಕ್ರೈಂ ಥ್ರಿಲ್ಲರ್ ಕಥಾಹಂದರ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಜುಲೈ ಅಂತ್ಯದ ವೇಳೆಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ನಿರ್ಮಿಸುತ್ತಿರುವ ಈ ಚಿತ್ರವನ್ನು ಲೋಹಿತ್ ಎಚ್. ನಿರ್ದೇಶಿಸುತ್ತಿದ್ದಾರೆ. ಎಸ್.ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸುತ್ತಿದ್ದಾರೆ. ಶೈನ್ ಶೆಟ್ಟಿ, ದೇವರಾಜ್, ವಿಜಯ್ ಚೆಂಡೂರ್, ವಾಸುಕಿ ವೈಭವ್, ಸಾಧುಕೋಕಿಲ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT