ರೈತನ ಕುರಿತಾದ ಕಥೆ ಹೊಂದಿರುವ ‘ಮಹಾ ಕಾಳಿಪುತ್ರ’ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭ ಇತ್ತೀಚೆಗಷ್ಟೇ ನಡೆಯಿತು. ಗಿರೀಶ್ ಎಸ್.ಎಂ ಚಿತ್ರ ನಿರ್ದೇಶನದ ಜತೆಗೆ ನಾಯಕನಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ.

‘ಮೂಲತಃ ನಾನೊಬ್ಬ ರೈತ. ಹೀಗಾಗಿ ರೈತನ ಬಗ್ಗೆ ಸಿನಿಮಾ ಮಾಡಲು ಬಂದಿದ್ದೇನೆ. ಇದು ನನ್ನ ಮೊದಲ ಚಿತ್ರ. ಮಹಾಕಾಳಿ ಪುತ್ರ ಎಂದರೆ ಕಾಳಿಯ ಆರಾಧಕ. ರೈತರು ಪ್ರತಿದಿನ ದೇವಿಯ ಪೂಜೆ ಮಾಡಿಕೊಂಡೇ ತಮ್ಮ ಕಾಯಕಕ್ಕೆ ಹೊರಡುತ್ತಾರೆ. ಅಂಥ ರೈತನನ್ನು ದೇವಿ ಪುತ್ರ ಎಂದು ಚಿತ್ರದಲ್ಲಿ ತೋರಿಸುತ್ತಿದ್ದೇವೆ. ಮಣ್ಣನ್ನು ನಂಬಿ ದುಡಿಯುವ ರೈತನಿಂದ ಹಿಡಿದು ದೇಶ ಕಾಯುವ ಸೈನಿಕನವರೆಗೆ ಕಥೆ ಸಾಗುತ್ತದೆ. ಈ ತಿಂಗಳ 15ರಿಂದ ಆರಂಭಿಸಿ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸುತ್ತಿದ್ದೇವೆ’ ಎಂದರು ನಿರ್ದೇಶಕ.

ತಿರುಪತಿ ತಿರುಮಲ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ದೇಶಕರೇ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಾಹುಲ್ ವಸ್ತರಾ ಸಂಗೀತ, ಕೀರ್ತನ್ ಪೂಜಾರಿ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.