ವಿಜಯ ರಾಘವೇಂದ್ರ ನಾಯಕನಾಗಿ ನಟಿಸುತ್ತಿರುವ ‘ಮಹಾನ್’ ಚಿತ್ರದ ಫಸ್ಟ್ಲುಕ್ ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಪಿ.ಸಿ.ಶೇಖರ್ ನಿರ್ದೇಶನದ ಈ ಚಿತ್ರದಲ್ಲಿ ವಿಜಯ ರಾಘವೇಂದ್ರ ರೈತನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಸಂಕ್ರಾಂತಿಗೂ ರೈತರಿಗೂ ಅವಿನಾಭಾವ ಸಂಬಂಧ. ಈ ಹಬ್ಬವನ್ನು ಕೃಷಿಕರು ಸುಗ್ಗಿ ಹಬ್ಬ ಎಂದೇ ಆಚರಿಸುತ್ತಾರೆ. ಅಂಥ ರೈತರ ಕುರಿತಾದ ಕಥಾಹಂದರ ಹೊಂದಿರುವ ಚಿತ್ರವಿದು. ಹೀಗಾಗಿ ಈ ಸಂದರ್ಭದಲ್ಲಿ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ ಮಾಡಿದ್ದೇವೆ. ಇಲ್ಲಿ ‘ಮಹಾನ್’ ಎಂದರೆ ರೈತ. ಇದೊಂದು ರೈತರ ಬದುಕಿನ ಬವಣೆಗಳನ್ನು ತಿಳಿಸುವ ಕಥಾಹಂದರ ಹೊಂದಿರುವ ಚಿತ್ರ. ನಮಗೆ ದೇಶ ಕಾಯುವ ಸೈನಿಕರು ಎಷ್ಟು ಮುಖ್ಯವೊ, ಅದೇ ರೀತಿ ರೈತರು ಕೂಡ ಬಹುಮುಖ್ಯ. ಇಂತಹ ರೈತರ ಕಷ್ಟಗಳಿಗೆ ಸ್ಪಂದಿಸುವ ಹಾಗೂ ಅವರ ಪರ ಧ್ವನಿ ಎತ್ತುವ ಪಾತ್ರದಲ್ಲಿ ವಿಜಯ ರಾಘವೇಂದ್ರ ಕಾಣಿಸಿಕೊಂಡಿದ್ದಾರೆ’ ಎನ್ನುತ್ತಾರೆ ನಿರ್ದೇಶಕ.

ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಬಂಡವಾಳ ಹೂಡಿದ್ದಾರೆ. ರಾಧಿಕಾ ನಾರಾಯಣ್, ಮಿತ್ರ, ನಮ್ರತಾ ಗೌಡ, ವರ್ಷ ಬೊಳ್ಳಮ್ಮ ಮುಂತಾದವರು ಈ ಚಿತ್ರದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.