ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಕೋವಿಡ್-19‌ ಮಾರ್ಗಸೂಚಿ ಉಲ್ಲಂಘನೆ; ಚಿತ್ರತಂಡದ ವಿರುದ್ಧ ದೂರು

Last Updated 3 ಏಪ್ರಿಲ್ 2021, 6:42 IST
ಅಕ್ಷರ ಗಾತ್ರ

ಪಾಲ್ಘರ್‌: ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆಯಲ್ಲಿ ಕೋವಿಡ್‌–19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದಡಿ ಚಿತ್ರ ತಂಡವೊಂದರ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

‘ಮಾರ್ಚ್‌ 24ರಂದು ವಾಸೈಯ ಸನ್‌ಸಿಟಿ ಮೈದಾನದಲ್ಲಿ ಫಿಲಂ ಸೆಟ್‌ ನಿರ್ಮಿಸುವ ಕಾರ್ಯ ನಡೆದಿತ್ತು. 100ಕ್ಕೂ ಹೆಚ್ಚು ಮಂದಿ ಸೆಟ್‌ ಹಾಕುವಲ್ಲಿ ತೊಡಗಿದ್ದರು. ಅವರು ಮಾಸ್ಕ್‌ ಧರಿಸಿರಲಿಲ್ಲ ಮತ್ತು ವೈಯಕ್ತಿ ಅಂತರವನ್ನೂ ಕಾಯ್ದುಕೊಂಡಿರಲಿಲ್ಲ ಎಂದು ಮಾಣಿಕ್‌ಪುರ್‌ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರುಶನಿವಾರ ತಿಳಿಸಿದರು.

‘ಈ ಹಿನ್ನೆಲೆಯಲ್ಲಿ ಚಿತ್ರತಂಡದ ಕೆಲವು ಸದಸ್ಯರ ವಿರುದ್ಧ ಗುರುವಾರ ಅಪರಾಧ ಪ್ರಕರಣ ದಾಖಲಿಸಲಾಗಿದೆ. ಆದರೆ ಈವರೆಗೆ ಯಾರನ್ನು ಬಂಧಿಸಿಲ್ಲ ’ ಎಂದು ಅವರು ಹೇಳಿದರು.

ಮಹಾರಾಷ್ಟ್ರದಲ್ಲಿ ಶುಕ್ರವಾರ ಹೊಸದಾಗಿ 47,827 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಮಹಾರಾಷ್ಟ್ರದ ಒಟ್ಟು ಪ್ರಕರಣಗಳ ಸಂಖ್ಯೆ 29,04,076ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT