ಮುಂಬೈ: ಜೀವ ಬೆದರಿಕೆ ಹಿನ್ನೆಲೆ ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಮಹಾರಾಷ್ಟ್ರ ಸರ್ಕಾರ ‘ವೈ ಪ್ಲಸ್’ ಶ್ರೇಣಿಯ ಭದ್ರತೆ ನೀಡಿದೆ ಎಂದು ತಿಳಿದುಬಂದಿದೆ.
'ಪಠಾಣ್' ಮತ್ತು 'ಜವಾನ್' ಚಿತ್ರಗಳ ನಂತರ ತಮಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಶಾರುಖ್ ಖಾನ್, ರಾಜ್ಯ ಸರ್ಕಾರಕ್ಕೆ ಲಿಖಿತ ರೂಪದಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆ ಭದ್ರತೆ ಹೆಚ್ಚಿಸಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ
ಈ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಬಂದ ಹಿನ್ನೆಲೆ ನಟ ಸಲ್ಮಾನ್ ಖಾನ್ ಅವರಿಗೂ ವೈ ಪ್ಲಸ್ ಭದ್ರತೆ ನೀಡಲಾಗಿತ್ತು. ನಟಿ ಕಂಗಾನ ರನೌತ್ ಅವರಿಗೂ ಈ ಭದ್ರತೆ ನೀಡಲಾಗಿತ್ತು. ಉಳಿದಂತೆ ಅಮಿತಾಬ್ ಬಚ್ಚನ್, ಅಮೀರ್ ಖಾನ್, ಅಕ್ಷಯ್ ಕುಮಾರ್ ಮತ್ತು ಅನುಪಮ್ ಖೇರ್ ಅವರು ‘ಎಕ್ಸ್’ ಶ್ರೇಣಿಯ ಭದ್ರತೆ ಪಡೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.