ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಕ್ರೊಸಾಫ್ಟ್‌ ರೂವಾರಿ ಬಿಲ್‌ ಗೇಟ್ಸ್‌ ಭೇಟಿಯಾದ ನಟ ಮಹೇಶ್ ಬಾಬು –ನಮ್ರತಾ ದಂಪತಿ

ಅಕ್ಷರ ಗಾತ್ರ

ನವದೆಹಲಿ: ತೆಲುಗು ನಟ ಮಹೇಶ್‌ ಬಾಬು ಮತ್ತು ಪತ್ನಿ ನಮ್ರತಾ ಶಿರೋಡ್ಕರ್ ಅವರು ನ್ಯೂಯಾರ್ಕ್‌ನಲ್ಲಿ ಮೈಕ್ರೊಸಾಫ್ಟ್‌ ಸಂಸ್ಥಾಪಕ ಬಿಲ್‌ ಗೇಟ್ಸ್ ಅವರನ್ನು ಭೇಟಿಯಾಗಿದ್ದಾರೆ.

ಸಿನಿಮಾಗಳಿಂದ ಕೊಂಚ ಬಿಡುವು ಪಡೆದಿರುವ ಮಹೇಶ್ ಬಾಬು ಅವರು ಪತ್ನಿ ಹಾಗೂ ಮಕ್ಕಳೊಂದಿಗೆ ವಿಹಾರಕ್ಕೆಂದು ವಿದೇಶಕ್ಕೆ ತೆರಳಿದ್ದಾರೆ. ಇದೇ ವೇಳೆ ಖ್ಯಾತ ಉದ್ಯಮಿ ಬಿಲ್‌ ಗೇಟ್ಸ್ ಅವರನ್ನು ಮಹೇಶ್ ಭೇಟಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಕ್ಲಿಕ್ಕಿಸಿದ ಫೋಟೊವನ್ನು ಮಹೇಶ್‌ ಬಾಬು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಬಿಲ್‌ ಗೇಟ್ಸ್‌ ಅವರ ಭೇಟಿಗೆ ಅವಕಾಶ ಲಭಿಸಿತು. ವಿಶ್ವ ಕಂಡ ಶ್ರೇಷ್ಠ ವ್ಯಕ್ತಿಗಳಲ್ಲಿ ಇವರೂ ಒಬ್ಬರು. ಅವರು ತುಂಬಾ ವಿನಮ್ರ ಹಾಗೂ ನಿಜಕ್ಕೂ ಸ್ಫೂರ್ತಿದಾಯಕ ವ್ಯಕ್ತಿ’ ಎಂದು ಬರೆದುಕೊಂಡಿದ್ದಾರೆ.

ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಹೇಶ್‌ ಬಾಬು ಅಭಿನಯದ ‘ಸರ್ಕಾರು ವಾರಿ ಪಾಟ’ ಸಿನಿಮಾ ಮೇ 12ರಂದು ವಿಶ್ವದಾದ್ಯಂತ ತೆರೆಕಂಡಿತ್ತು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

‘ಗೀತಾ ಗೋವಿಂದಂ’ ಖ್ಯಾತಿಯ ಪರಶುರಾಮ್‌ ಆ್ಯಕ್ಷನ್‌ ಕಟ್‌ ಹೇಳಿರುವ ಈ ಸಿನಿಮಾದಲ್ಲಿ ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದರು.

ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT