ಸೋಮವಾರ, ಸೆಪ್ಟೆಂಬರ್ 28, 2020
21 °C

ಮಹೇಶ್‌ ಹುಟ್ಟುಹಬ್ಬಕ್ಕೆ ‘ಸರ್ಕಾರು ವಾರಿ ಪಾಟ’ ಚಿತ್ರದ ಮೋಷನ್ ಪೋಸ್ಟರ್ ಉಡುಗೊರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಇಂದು (ಆಗಸ್ಟ್‌ 9) ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಹುಟ್ಟಿದ ದಿನ. ಈ ದಿನದ ಸಂಭ್ರಮಕ್ಕೆ ಅವರ ಮುಂದಿನ ಚಿತ್ರ ‘ಸರ್ಕಾರು ವಾರಿ ಪಾಟ’ದ ಮೋಷನ್ ಪೋಸ್ಟರ್ ಕೂಡ ಜೊತೆಯಾಗಿದೆ.

ತಮ್ಮ 45ನೇ ವರ್ಷದ ಹುಟ್ಟುಹಬ್ಬದಂದು ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳನ್ನು ಖುಷಿ ಪಡಿಸಿದ್ದಾರೆ ಮಹೇಶ್‌. ಈ ಮೊದಲು ತಂದೆ ಕೃಷ್ಣ ಅವರ ಹುಟ್ಟುಹಬ್ಬದಂದು ಚಿತ್ರದ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಹೊಸ ಸಿನಿಮಾ ಮಾಡುತ್ತಿರುವುದಾಗಿ ತಿಳಿಸಿದ್ದರು. ಆದರೆ ಅಂದು ಸಿನಿಮಾದ ಕುರಿತು ಹೆಚ್ಚಿನ ವಿವರವನ್ನು ಹಂಚಿಕೊಂಡಿರಲಿಲ್ಲ.

ಜೂನ್‌ ತಿಂಗಳಲ್ಲಿ ಮಹೇಶ್‌ ಇನ್‌ಸ್ಟಾಗ್ರಾಂ ಲೈವ್‌ನಲ್ಲಿ ಮೂಲಕ ಅಭಿಮಾನಿಗಳ ಜೊತೆ ಸಂವಾದ ನಡೆಸಿದ್ದರು. ಆಗ ಅಭಿಮಾನಿಗಳು ‘ಸರ್ಕಾರು ವಾರಿ ಪಾಟ’ ಸಿನಿಮಾದ ಕುರಿತು ಪ್ರಶ್ನೆ ಕೇಳಿದ್ದರು. ಆ ಪ್ರಶ್ನೆಗೆ ಮಹೇಶ್ ‘ಈ ಸಿನಿಮಾ ಒಂದು ಉತ್ತಮ ಸಂದೇಶವಿರುವ ಮನೋರಂಜನಾ ಚಿತ್ರ. ಈ ಸಿನಿಮಾದ ಕುರಿತು ತುಂಬಾನೇ ಉತ್ಸುಕನಾಗಿದ್ದೇನೆ’ ಎಂದಿದ್ದರು.

‘ಸರ್ಕಾರು ವಾರಿ ಪಾಟ’ ಸಿನಿಮಾಕ್ಕೆ ಗೀತಾ ಗೋವಿಂದಂ ಖ್ಯಾತಿಯ ಪರಶುರಾಮ್‌ ಅವರ ಚಿತ್ರಕಥೆ, ನಿರ್ದೇಶನವಿದೆ. ‘ನಾನು ಅನೇಕ ದಿನಗಳಿಂದ ಮಹೇಶ್ ಜೊತೆ ಕೆಲಸ ಮಾಡಲು ಕಾತುರದಿಂದ ಕಾಯುತ್ತಿದೆ. ಈ ಕಾಯುವಿಕೆ ಈಗ ಅಂತ್ಯಗೊಂಡಿದೆ. ನನಗೆ ತುಂಬಾ ಸಂತೋಷವಾಗುತ್ತಿದೆ. ಸಿನಿಮಾ ಸೆಟ್‌ಗೆ ತೆರಳಲು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದೇನೆ. ಇದು ನನ್ನ ಕನಸು ನನಸಾದ ಕ್ಷಣ’ ಎಂದು ಪರಶುರಾಮ್ ಕೆಲದಿನಗಳ ಹಿಂದೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಈ ಸಿನಿಮಾವನ್ನು ಮೈತ್ರಿ ಮೂಮಿ ಮೇಕರ್ಸ್ ನಿರ್ಮಾಣ ಮಾಡುತ್ತಿದ್ದಾರೆ. ಎಸ್ಎಸ್ ತಮನ್ ಸಂಗೀತ ನಿರ್ದೇಶನವಿದೆ. ಸಿನಿಮಾಕ್ಕೆ ನಾಯಕಿ ಯಾರು ಎಂಬುದು ಅಧೀಕೃತವಾಗಿ ತಿಳಿದುಬಂದಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು