ಮಂಗಳವಾರ, ಜನವರಿ 21, 2020
28 °C

ವಿದೇಶದಲ್ಲೂ‘ನೀಕೆವ್ವರು’ಸದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನ್ನಡತಿ ರಶ್ಮಿಕಾ ಮಂದಣ್ಣ ಹಾಗೂ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ 'ಸರಿಲೇರು ನೀಕೆವ್ವರು' ಸಿನಿಮಾ ಇದೇ 11 ರಂದು ಬಿಡುಗಡೆಯಾಗಿದ್ದು, ಮೊದಲ ದಿನವೇ ಬಾಕ್ಸ್‌ಆಫೀಸ್‌ ಕಲೆಕ್ಷನ್‌ ಹೊಸ ದಾಖಲೆ ಸೃಷ್ಟಿಸಿದೆ.

ಸಿನಿಮಾ ಮೊದಲ ದಿನ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ₹37 ಕೋಟಿಗೂ ಅಧಿಕ ಕಲೆಕ್ಷನ್ ಆಗಿದೆ. ತೆಲಂಗಾಣದ ನಿಜಾಮಾಬಾದ್ ನಗರದಲ್ಲೇ ₹10 ಕೋಟಿ ಕಲೆಕ್ಷನ್ ಆಗಿದೆ. ಇದುವರೆಗೆ ಮೊದಲ ದಿನ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾಗಳ ಎಲ್ಲ ದಾಖಲೆಗಳನ್ನು ನೀಕೆವ್ವರು ಮುರಿದಿದೆ.

ಮಹೇಶ್ ಬಾಬು ಸೇನಾ ಅಧಿಕಾರಿಯಾಗಿ ಕಾಣಿಸಿಕೊಂಡಿರುವ ಈ ಚಿತ್ರ ವಿದೇಶಗಳಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ. ಅಮೆರಿಕದಲ್ಲಿಯೂ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಮೊದಲ ದಿನ ವಿದೇಶಿ ನೆಲದಲ್ಲಿ ಸಿನಿಮಾ ₹6 ಕೋಟಿ ಕಲೆಕ್ಷನ್ ಮಾಡಿದೆ. ಚೆನ್ನೈನಲ್ಲಿ ಸಿನಿಮಾ 17 ಲಕ್ಷ ಕಲೆಕ್ಷನ್ ಮಾಡಿದೆ. ಬೇರೆ ಬೇರೆ ರಾಜ್ಯಗಳಲ್ಲಿಯೂ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 

ಮೂರು ದಿನದಲ್ಲಿ ಚಿತ್ರದ ಒಟ್ಟಾರೆ ಗಳಿಕೆ ₹47 ಕೋಟಿ ದಾಟಿದೆ ಎಂದು ಅಂದಾಜು ಮಾಡಲಾಗಿದೆ. ಈ ಚಿತ್ರ ಬಾಹುಬಲಿ–2 ದಾಖಲೆಯನ್ನು ಮುರಿದು ಹೊಸ ದಾಖಲೆ ನಿರ್ಮಿಸಿದೆ ಎಂದು ಹೇಳಲಾಗುತ್ತಿದೆ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು