ಮಂಗಳವಾರ, ಮಾರ್ಚ್ 28, 2023
21 °C

ಮಹೇಶ್ ಬಾಬು ಅಭಿನಯದ ‘ಸರ್ಕಾರು ವಾರಿ ಪಾಟ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅಭಿನಯದ ಬಹು ನಿರೀಕ್ಷಿತ ‘ಸರ್ಕಾರು ವಾರಿ ಪಾಟ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರತಂಡ ದೀಪಾವಳಿ ಪ್ರಯುಕ್ತ ಈ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.

ಮುಂದಿನ ವರ್ಷ ಏಪ್ರೀಲ್ 1 ರಂದು ಚಿತ್ರಮಂದಿರಗಳಲ್ಲಿ  ‘ಸರ್ಕಾರು ವಾರಿ ಪಾಟ’ ಬಿಡುಗಡೆಯಾಗಲಿದೆ.

ತಮ್ಮ 45ನೇ ವರ್ಷದ ಹುಟ್ಟುಹಬ್ಬದಂದು (ಆ.9) ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳನ್ನು ಖುಷಿಪಡಿಸಿದ್ದ ಮಹೇಶ್‌ ಬಾಬು ಕೆಲ ದಿನದ ನಂತರ ಸಿನಿಮಾದ ಫಸ್ಟ್‌ಲುಕ್ ಪೋಸ್ಟರ್ ಬಿಡುಗಡೆ ಮಾಡಿ ಬರುವ ವರ್ಷ ಜೊತೆಯಾಗೋಣ ಎಂದು ಬರೆದುಕೊಂಡಿದ್ದರು. ಈ ಮೊದಲು ‘ಸರ್ಕಾರು ವಾರಿ ಪಾಟ’  2022ರ ಜನವರಿ 13ರಂದು ತೆರೆಗೆ ಬರಲಿದೆ ಎನ್ನಲಾಗಿತ್ತು.

 

ಕೊರೊನಾ ಕಾರಣದಿಂದಾಗಿ ಚಿತ್ರೀಕರಣ ದೀರ್ಘಕಾಲ ಮುಂದೂಡಲ್ಪಟ್ಟಿತ್ತು. ಈಗಾಗಲೇ ಎರಡೂ ಹಂತದ ಶೂಟಿಂಗ್‌ ಮಕ್ತಾಯವಾಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾಕ್ಕೆ ಗೀತಾ ಗೋವಿಂದಂ ಖ್ಯಾತಿಯ ಪರಶುರಾಮ್‌ ಅವರ ಚಿತ್ರಕಥೆ, ನಿರ್ದೇಶನವಿದೆ. ಈ ಸಿನಿಮಾವನ್ನು ಮೈತ್ರಿ ಮೂಮಿ ಮೇಕರ್ಸ್‌ನವರು ನಿರ್ಮಾಣ ಮಾಡುತ್ತಿದ್ದಾರೆ. ಎಸ್ಎಸ್ ತಮನ್ ಸಂಗೀತ ನಿರ್ದೇಶನವಿದೆ. ಮಹೇಶ್‌ ಬಾಬುಗೆ ಜೋಡಿಯಾಗಿ ಕೀರ್ತಿ ಸುರೇಶ್‌ ನಟಿಸುತ್ತಿದ್ದಾರೆ.

ಇದನ್ನೂ ಓದಿ: ಜೈ ಭೀಮ್‌ ಸಿನಿಮಾದಲ್ಲಿ ಹಿಂದಿ ಭಾಷಾ ವಿವಾದದ ಕಿಡಿ ಹೊತ್ತಿಸಿದ ನಟ ಪ್ರಕಾಶ್ ರಾಜ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು