ಸೋನಂಗೆ ಕಾಡಿದ ಮಹಿರಾ ಅನುಪಸ್ಥಿತಿ

ಸೋಮವಾರ, ಜೂನ್ 17, 2019
22 °C
mahira khan, sonam kapoor

ಸೋನಂಗೆ ಕಾಡಿದ ಮಹಿರಾ ಅನುಪಸ್ಥಿತಿ

Published:
Updated:
Prajavani

ಕೆಂಪು ಬಣ್ಣದ ಉಡುಪಿನಲ್ಲಿ ಆಕರ್ಷಕವಾಗಿ ಕಾಣುತ್ತಿದ್ದ ಸೋನಂ, ಆ ಚಿತ್ರವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಗೆ ಅಪ್‌ಲೋಡ್ ಮಾಡಿ, ‘ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಸುಂದರಿ’ ಎಂಬರ್ಥದ ಸಂದೇಶವನ್ನು ರವಾನಿಸಿದ್ದಾರೆ.

ಹಿಂದಿನ ವರ್ಷದ ಕಾನ್ ಅಂತರಾಷ್ಟ್ರೀಯ ಸಿನಿಮೋತ್ಸವದಲ್ಲಿ ಜೋಡಿಯಾಗಿ ಭಾಗವಹಿಸಿದ್ದ ಪಾಕಿಸ್ತಾನದ ನಟಿ ಮಹಿರಾ ಖಾನ್ ಮತ್ತು ಬಾಲಿವುಡ್ ನಟಿ ಸೋನಂ ಕಪೂರ್ ನೆರೆದವರ ಕೇಂದ್ರಬಿಂದುವಾಗಿದ್ದರು. ಆದರೆ, ಈ ಬಾರಿ ಕಾರಣಾಂತರಗಳಿಂದ ಮಹಿರಾಗೆ ಕಾನ್ ಸಿನಿಮೋತ್ಸವದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.

ಸಿನಿಮೋತ್ಸವದಲ್ಲಿ ಭಾಗವಹಿಸಿದ್ದ ಸೋನಂ ಕಪೂರ್‌ಗೆ ಮಹಿರಾ ಖಾನ್ ಅನುಪಸ್ಥಿತಿ ತುಂಬಾ ಕಾಡಿದೆಯಂತೆ. ಕೆಂಪು ಬಣ್ಣದ ಉಡುಪಿನಲ್ಲಿ ಆಕರ್ಷಕವಾಗಿ ಕಾಣುತ್ತಿದ್ದ ಸೋನಂ, ಆ ಚಿತ್ರವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಗೆ ಅಪ್‌ಲೋಡ್ ಮಾಡಿ, ‘ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಸುಂದರಿ’ ಎಂಬರ್ಥದ ಸಂದೇಶವನ್ನು ರವಾನಿಸಿದ್ದಾರೆ. 

ಈಚೆಗಷ್ಟೇ ಮಹಿರಾ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ತಮ್ಮಮ್ಮನ ಕೆಂಪು ಬಣ್ಣದ ಮದುವೆ ಸೀರೆ ಮತ್ತು ಬೈತಲೆ ಬೊಟ್ಟು ಧರಿಸಿ ವೈರಲ್ ಆಗಿದ್ದರು. ಆ ಚಿತ್ರಕ್ಕೆ ಹಲವರು ಕಾಮೆಂಟ್ ಕೂಡಾ ಮಾಡಿದ್ದರು. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !