ಚಂದನವನದಲ್ಲಿ ಸಾಕಷ್ಟು ವಿಭಿನ್ನ ಚಿತ್ರಗಳನ್ನು ನಿರ್ದೇಶಿಸಿರುವ ಕೋಡ್ಲು ರಾಮಕೃಷ್ಣ ಈಗ ಮತ್ತೊಂದು ಮಕ್ಕಳ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಆ ಚಿತ್ರದ ಹೆಸರು ‘ಮಕ್ಕಳ ತಂಟೆಗೆ ಬಂದ್ರೆ ಹುಷಾರ್’.

ಮಕ್ಕಳ ನಿತ್ಯ ಚಟುವಟಿಕೆ, ಪೋಷಕರ ಜೀವನಶೈಲಿ, ಮೊಬೈಲ್ ಗೀಳು ಹಾಗೂ ಶ್ರೀಮಂತ, ಮಧ್ಯಮ ಹಾಗೂ ಬಡ ಮಕ್ಕಳು ಕೊರೋನ ಬರುವ ಮೊದಲು ಹಾಗೂ ನಂತರ ಹೇಗಿದ್ದಾರೆ? ಎಂಬೆಲ್ಲಾ ಅಂಶವನ್ನು ಈ ಚಿತ್ರ ಒಳಗೊಂಡಿದೆ.

ಚಿತ್ರೀಕರಣ ಆರಂಭವಾಗಿ ಕೇವಲ ನಲವತ್ತು ದಿನಗಳಲ್ಲಿ ಚಿತ್ರದ ಸೆನ್ಸಾರ್ ಸಹ ಪೂರ್ಣವಾಗಿದ್ದು, ತೆರೆಗೆ ಬರಲು ಸಿದ್ದವಾಗಿದೆ. ಪ್ರಾದೇಶಿಕ ಸೆನ್ಸಾರ್ ಮಂಡಳಿ ಸಹ ಈ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದೆ. ಸಂಕ್ರಾಂತಿ ವೇಳೆಗೆ ಟ್ರೇಲರ್ ಬಿಡುಗಡೆಯಾಗಲಿದೆ.

ಭುವನ್ ಫಿಲಂಸ್ ಲಾಂಛನದಲ್ಲಿ ನಾರಾಯಣ್ ಹಾಗೂ ಕೋಡ್ಲು ರಾಮಕೃಷ್ಣ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ದೀಪು(ರಾಮನಗರ) ಈ ಚಿತ್ರದ ಸಹ ನಿರ್ಮಾಪಕರು.

ಕ್ರಿಶ್ ಜೋಶಿ ಅವರ ಕಥೆಗೆ ಕೋಡ್ಲು ರಾಮಕೃಷ್ಣ ಹಾಗೂ ರಾಮಮೂರ್ತಿ ಚಿತ್ರಕಥೆ ರಚಿಸಿದ್ದಾರೆ. ಕ್ರಿಶ್ ಜೋಶಿ ಅವರೊಡಗೂಡಿ ಕೋಡ್ಲು ರಾಮಕೃಷ್ಣ ಸಂಭಾಷಣೆ ಬರೆದಿದ್ದಾರೆ.

ಶಮಿತ್ ಮಲ್ನಾಡ್ ಸಂಗೀತ ನಿರ್ದೇಶನ, ನಾಗೇಂದ್ರ ಛಾಯಾಗ್ರಹಣ ಹಾಗೂ ವಸಂತ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

ಮುಖ್ಯಮಂತ್ರಿ ಚಂದ್ರು, ವಿನಯಾ ಪ್ರಕಾಶ್, ಶಿವಧ್ವಜ್, ಪ್ರಥಮ ಪ್ರಕಾಶ್, ಟೆನ್ನಿಸ್ ಕೃಷ್ಣ, ಸುಧಾ ಬೆಳವಾಡಿ, ಕುಮಾರಿ ಐಶ್ವರ್ಯ, ಶ್ರೀಧರ್ ನಾಯಕ್, ಸ್ನೇಹ ಭಟ್, ಪ್ರಕಾಶ್, ಭವಾನಿ ಪ್ರಕಾಶ್, ಬೇಬಿ ಗಗನ, ಬೇಬಿ ಯಶಿಕಾ, ಬೇಬಿಶ್ರೀ, ಬೇಬಿ ಪ್ರತಿಷ್ಠ ದೇಶಪಾಂಡೆ, ಯುಕ್ತ ಹೆಗಡೆ, ಮಾಸ್ಟರ್ ವಿಷ್ಣು ಸಂಜಯ್, ಮಾಸ್ಟರ್ ತರುಣ್, ಮಾಸ್ಟರ್ ಸರ್ವಜ್ಞ, ಮಾಸ್ಟರ್ ಯುವರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.