ಸೋಮವಾರ, ಸೆಪ್ಟೆಂಬರ್ 28, 2020
28 °C

ಬಾಲಿವುಡ್‌ ನಟಿ ಮಲೈಕಾ ಅರೋರಾಗೆ ಕೋವಿಡ್‌ ದೃಢ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಬಾಲಿವುಡ್‌ ನಟಿ ಮಲೈಕಾ ಅರೋರಾ ಅವರಿಗೆ ಕೋವಿಡ್‌–19 ಇರುವುದು ಸೋಮವಾರ ದೃಢಪಟ್ಟಿದ್ದು, ಅವರು ಮನೆಯಲ್ಲಿ ಪ್ರತ್ಯೇಕ ವಾಸಕ್ಕೆ ಒಳಗಾಗಿದ್ದಾರೆ.  

ಈ ಬಗ್ಗೆ ಮಲೈಕಾ ಅರೋರಾ ಅವರು ಇನ್‌ಸ್ಟಾಗ್ರಾಂ ಮೂಲಕ ತಿಳಿಸಿದ್ದಾರೆ.

‘ನನಗೆ ಇವತ್ತು ಕೊರೊನಾ ಸೋಂಕು‌ ದೃಢಪಟ್ಟಿದೆ. ಆದರೆ ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ.  ನಾನು ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ವೈದ್ಯರ ಮಾರ್ಗದರ್ಶನಗಳಿಗೆ ಅನುಸಾರವಾಗಿ ನಾನು ಮನೆಯಲ್ಲಿ ಪ್ರತ್ಯೇಕ ವಾಸ ಮಾಡುತ್ತಿದ್ದೇನೆ. ನೀವು ಕೂಡ ಮನೆಯಲ್ಲಿ ಸುರಕ್ಷಿತವಾಗಿರಿ’ ಎಂದು ಇನ್‌ಸ್ಟಾಗ್ರಾಂನಲ್ಲಿ ಅವರು ಬರೆದುಕೊಂಡಿದ್ದಾರೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.