ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮು ನಿರ್ದೇಶನದ ಮೆಜೆಸ್ಟಿಕ್-2 ನಲ್ಲಿ ಮಾಲಾಶ್ರೀ

Published 1 ಸೆಪ್ಟೆಂಬರ್ 2024, 18:58 IST
Last Updated 1 ಸೆಪ್ಟೆಂಬರ್ 2024, 18:58 IST
ಅಕ್ಷರ ಗಾತ್ರ

ದರ್ಶನ್‌ ಅಭಿನಯದ ‘ಮೆಜೆಸ್ಟಿಕ್‌’ ಚಿತ್ರದ ಕಥೆ ಬರೆದಿದ್ದ ರಾಮು ನಿರ್ದೇಶಿಸುತ್ತಿರುವ ‘ಮೆಜೆಸ್ಟಿಕ್-2’ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯ ಹಂತ ತಲುಪಿದೆ. ಚಿತ್ರದ ವಿಶೇಷ ಪಾತ್ರದಲ್ಲಿ ಮಾಲಾಶ್ರೀ ಕಾಣಿಸಿಕೊಂಡಿದ್ದಾರೆ. 

‘ಇದರಲ್ಲಿ ನನ್ನದು ಒಂದು ವಿಶೇಷ ಪಾತ್ರ. ನಿರ್ದೇಶಕ ರಾಮು ಅವರು ನಮ್ಮ ರಾಮು ಫಿಲಂಸ್ ಬ್ಯಾನರಿನಲ್ಲಿ ಕೆಲಸ ಮಾಡಿದ್ದಾರೆ. ನನ್ನನ್ನು ಕಂಡರೆ ತುಂಬಾ ಅಭಿಮಾನ. ಹೀಗಾಗಿ ಚಿತ್ರದ ಹಾಡೊಂದಕ್ಕೆ ನಾನು ಸ್ಟೆಪ್ ಹಾಕಿದ್ದೇನೆ. ಮಾರಮ್ಮ ದೇವಿ ಹಾಡಿಗೆ ನನ್ನ ಸ್ಟೆಪ್ಸ್ ನೋಡಿ ನನಗೇ ಖುಷಿಯಾಯ್ತು. ನನ್ನ ಹಿಂದಿನ ದಿನಗಳನ್ನು ನೆನಪಿಸಿತು’ ಎಂದಿದ್ದಾರೆ ಮಾಲಾಶ್ರೀ.

ಈಗಿನ ಮೆಜೆಸ್ಟಿಕ್‌ನಲ್ಲಿ ಏನೆಲ್ಲ ಕರಾಳ ದಂಧೆಗಳು, ಅಕ್ರಮ ಚಟುವಟಿಕೆಗಳು ನಡೆಯುತ್ತವೆ ಎಂಬುದನ್ನು ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯ ಮೂಲಕ ಈ ಚಿತ್ರದಲ್ಲಿ ಹೇಳಲು ನಿರ್ದೇಶಕರು ಪ್ರಯತ್ನಿಸಿದ್ದಾರೆ. ಈ ಚಿತ್ರದಿಂದ ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಅವರ ಪುತ್ರ ಭರತ್ ನಾಯಕನಾಗಿ ಚಿತ್ರೋದ್ಯಮಕ್ಕೆ ಕಾಲಿಡುತ್ತಿದ್ದಾರೆ. ಅಮ್ಮಾ ಎಂಟರ್‌ಪ್ರೈಸಸ್ ಮೂಲಕ ಚಿತ್ರದುರ್ಗದ ಹೆಚ್.ಆನಂದಪ್ಪ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಸಂಹಿತಾ ವಿನ್ಯಾ ಚಿತ್ರದ ನಾಯಕಿ. ಈ ಚಿತ್ರಕ್ಕೆ ವಿನು ಮನಸು ಅವರ ಸಂಗೀತ ನಿರ್ದೇಶನವಿದ್ದು, ವೀನಸ್ ಮೂರ್ತಿ ಅವರು ಛಾಯಾಚಿತ್ರಗ್ರಹಣವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT