ತಿರುವನಂತಪುರ: ಮಲಯಾಳಂ ಸಿನಿಮಾ ನಟ ಹಾಗೂ ಶಾಸಕ ಮುಕೇಶ್‌ನನ್ನು ಲೈಂಗಿಕ ಕಿರುಕುಳ ಆರೋಪದಡಿಯಲ್ಲಿ ಕೇರಳ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಮಲಯಾಳಂ ಸಿನಿಮಾರಂಗದಲ್ಲಿ ನಟಿಯರು, ಸಹನಟಿಯರ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಕೇರಳ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ನೀಡಿದ್ದು ಮಲಯಾಳಂ ಚಿತ್ರರರಂಗದ ಕರಾಳ ಮುಖವನ್ನು ಬಿಚ್ಚಿಟ್ಟಿದೆ.
ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಕೇಶ್‌ನನ್ನು ವಿಚಾರಣೆ ನಡೆಸುತ್ತಿದ್ದರು. ಇದೀಗ ಅವರನ್ನು ಪೊಲೀಸರು ಬಂಧಿಸಿದ್ದರು. ಮುಕೇಶ್ ತಮ್ಮ ಮೇಲೆ ಆರೋಪ ಕೇಳಿ ಬಂದ ಕೂಡಲೇ ಚಲನಚಿತ್ರ ನೀತಿ ಸಮಿತಿಗೆ ರಾಜೀನಾಮೆ ಸಲ್ಲಿಸಿದ್ದರು
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಕೇಶ್‌ಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಇರುವುದರಿಂದ ಅವರು ಬಿಡುಗಡೆ ಆಗುವ ಸಾಧ್ಯತೆಗಳಿವೆ.
ಮಲಯಾಳಂ ನಟರಾದ ಜಯಸೂರ್ಯ, ಮಣಿಯನ್ಪಿಳ್ಳ ರಾಜು, ಇಡವೆಲ್ ಬಾಬು, ಚಂದ್ರಶೇಖರನ್ ಹಾಗೂ ಇತರರ ವಿರುದ್ಧ ಲೈಂಗಿಕ ಕಿರುಕುಳ ಗಂಭೀರ ಆರೋಪ ಕೇಳಿಬಂದಿವೆ.