ಪತ್ತನಂತಿಟ್ಟ: ಕೇರಳದ ಎನಾತ್ ಬಳಿ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ಮಲಯಾಳ ನಟ ಸಂತೋಷ್ ನಾಯರ್ (62) ಮೃತಪಟ್ಟಿದ್ದಾರೆ.

ಬೆಳಿಗ್ಗೆ 6.30ರ ಸುಮಾರಿಗೆ ನಾಯರ್ ಪ್ರಯಾಣಿಸುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಟೇರಿಂಗ್ ಎದೆಗೆ ಬಡಿದು ಗಂಭೀರವಾಗಿ ಗಾಯಗೊಂಡಿದ್ದ ನಾಯರ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ನಟ ಸಂತೋಷ್ ನಾಯರ್ ಕೊನೆಯುಸಿರೆಳೆದಿದ್ದಾರೆ. ಇನ್ನು, ಈ ಘಟನೆಯಲ್ಲಿ ನಾಯರ್ ಅವರ ಪತ್ನಿಗೂ ತೀವ್ರವಾಗಿ ಗಾಯಗೊಂಡಿದ್ದಾರೆ.

1982ರಲ್ಲಿ ಚಿತ್ರರಂಗ ಪ್ರವೇಶಿಸಿದ್ದ ನಾಯರ್, 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಅವರ ನಟನೆಯ ‘ಮೋಹಿನಿಯಾಟ್ಟಂ’ ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.