ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಣು ಬಿಗಿದ ಸ್ಥಿತಿಯಲ್ಲಿ ಮಲಯಾಳಂ ನಟಿ ಮೃತದೇಹ ಪತ್ತೆ

Published 1 ಸೆಪ್ಟೆಂಬರ್ 2023, 10:06 IST
Last Updated 1 ಸೆಪ್ಟೆಂಬರ್ 2023, 10:06 IST
ಅಕ್ಷರ ಗಾತ್ರ

ತಿರುವನಂತಪುರ: ಮಲಯಾಳಂ ನಟಿ ಅಪರ್ಣಾ ನಾಯರ್‌ (33) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೆಲವು ಸಿನಿಮಾ, ಧಾರಾವಾಹಿಗಳಲ್ಲಿ ನಟಿಸಿದ್ದ ಅಪರ್ಣಾ ತಿರುವನಂತಪುರದ ಕರಮನ ಪ್ರದೇಶದಲ್ಲಿ ಪತಿ ಮತ್ತು ಮಕ್ಕಳೊಂದಿಗೆ ವಾಸವಿದ್ದರು. ಗುರುವಾರ ರಾತ್ರಿ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆಸ್ಪತ್ರೆಯಿಂದ ಮಾಹಿತಿ ಪಡೆದು ಅಸಹಜ ಸಾವು ಎಂದು ಪ್ರಕರಣದ ದಾಖಲಿಸಲಾಗಿದೆ. 

ಕುಟುಂಬದಲ್ಲಿನ ಕಲಹ ಸಾವಿಗೆ ಕಾರಣ ಎನ್ನುವುದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಪರ್ಣಾ ಅವರು ದೇವಸಪರಶಮ್‌, ಆತ್ಮಸಖಿ ಸೇರಿ ಹಲವು ಮಲಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದರು. ಜತೆಗೆ ಕಲ್ಕಿ, ಮೇಘತೀರ್ಥಂ, ಸೇರಿ ಹಲವು ಸಿನಿಮಾಗಳಲ್ಲೂ ನಟನೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT