ಶನಿವಾರ, ಜುಲೈ 2, 2022
22 °C

‘ರಾಜಾ ಡಿಲಕ್ಸ್’ ಸಿನಿಮಾದಲ್ಲಿ ಪ್ರಭಾಸ್ ಜತೆ ನಟನೆ: ಮಾಳವಿಕಾ ಮೋಹನನ್ ಸುಳಿವು 

ಐಎಎನ್‌ಎಸ್ Updated:

ಅಕ್ಷರ ಗಾತ್ರ : | |

ಹೈದರಾಬಾದ್: ತೆಲುಗು ನಟ ಪ್ರಭಾಸ್ ಅವರ ಮುಂಬರುವ ಚಿತ್ರದಲ್ಲಿ ಅಭಿನಯಿಸುವುದಾಗಿ ಮಲಯಾಳಂ ನಟಿ ಮಾಳವಿಕಾ ಮೋಹನನ್ ಸುಳಿವು ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಪ್ರಭಾಸ್ ಅವರ ಮುಂದಿನ ಚಿತ್ರದಲ್ಲಿ ನಟಿಸುವುದು ಬಹುತೇಕ ಖಚಿತ’ ಎಂದು ಹೇಳಿಕೊಂಡಿದ್ದಾರೆ. 

‘ತೆಲುಗು ಪ್ರಾಜೆಕ್ಟ್‌ಗಾಗಿ ಮಾತುಕತೆ ನಡೆಸಲಾಗಿದೆ. ಚಿತ್ರದಲ್ಲಿ ನಟಿಸಲು ನಾನು ಒಪ್ಪಿಗೆ ಸೂಚಿಸಿದ್ದೇನೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ, ಚಿತ್ರದ ಚಿತ್ರೀಕರಣ ಶೀಘ್ರವೇ ಪ್ರಾರಂಭವಾಗಲಿದೆ’ ಎಂದು ಮಾಳಿವಿಕಾ ಹೇಳಿದ್ದಾರೆ. 

ಮಾರುತಿ ನಿರ್ದೇಶನದ ‘ರಾಜಾ ಡಿಲಕ್ಸ್’ ಸಿನಿಮಾದಲ್ಲಿ ಪ್ರಭಾಸ್ ನಟಿಸುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಶೀಘ್ರದಲ್ಲೇ  ನಿರ್ಮಾಪಕರು ಈ ಕುರಿತು ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ. 

ಈ ಸಿನಿಮಾದಲ್ಲಿ ‘ಉಪ್ಪೇನಾ’ ಸಿನಿಮಾ ಖ್ಯಾತಿಯ ಕೃತಿ ಶೆಟ್ಟಿ ಅವರು ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

ರಾಜಮೌಳಿ ನಿರ್ದೇಶನದ 'ಆರ್‌ಆರ್‌ಆರ್' ಸಿನಿಮಾ ನಿರ್ಮಾಪಕ ಡಿವಿವಿ ದಾನಯ್ಯ ‘ರಾಜಾ ಡಿಲಕ್ಸ್’ ಚಿತ್ರಕ್ಕೆ ಬಂಡವಾಳ ಹೂಡಿಕೆ ಮಾಡುತ್ತಿದ್ದಾರೆ.

ಓದಿ... ಪಾಕ್‌ ನಾಯಕಿಯ ಮಗುವಿನೊಂದಿಗೆ ಮುದ್ದಾಟ: ಸ್ಮೃತಿ ಮಂದಾನ ಭಾವನಾತ್ಮಕ ಪೋಸ್ಟ್ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು