ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ದೇಶಿಸಿದ ಮೊದಲ ಚಿತ್ರ ಬಿಡುಗಡೆ ಸಂದರ್ಭದಲ್ಲೇ ನಿಧನರಾದ ಮಲಯಾಳಂ ಯುವ ನಿರ್ದೇಶಕ

Last Updated 27 ಫೆಬ್ರುವರಿ 2023, 6:16 IST
ಅಕ್ಷರ ಗಾತ್ರ

ತಿರುವನಂತಪುರಂ: ಮಲಯಾಳಂ ಯುವ ನಿರ್ದೇಶಕ ಜೊಸೆಫ್ ಮನು ಜೇಮ್ಸ್ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.

ಅವರಿಗೆ ಕೇವಲ 31 ವರ್ಷ ವಯಸ್ಸಾಗಿತ್ತು. ಹೆಪಟೈಟಿಸ್‌ನಿಂದ ಬಳಲುತ್ತಿದ್ದ ಅವರು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಫೆಬ್ರುವರಿ 24ರಂದು ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಜೊಸೆಫ್ ಮನು ನಿಧನಕ್ಕೆ ಅವರ ಕುಟುಂಬದವರು, ಆಪ್ತರು, ಸ್ನೇಹಿತರು ಹಾಗೂ ಸಿನಿಮಾ ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಜೊಸೆಫ್ ಮನು ನಿರ್ದೇಶನದ ಮೊದಲ ಸಿನಿಮಾ ‘ನಾನ್ಸಿ ರಾಣಿ’ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆಗೆ ಸಿದ್ಧವಾಗಿತ್ತು. ‘ನಾನ್ಸಿ ರಾಣಿ’ ಚಿತ್ರ ತಂಡದವರು ಕೂಡ ಜೊಸೆಫ್ ಮನು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಜೊಸೆಫ್ ಮನು ಬಾಲ ನಟರಾಗಿ ಮಲಯಾಳಂ ಸಿನಿಮಾರಂಗಕ್ಕೆ ಪ್ರವೇಶ ಮಾಡಿದ್ದರು. ನಂತರ ಕೆಲವು ಸಿನಿಮಾಗಳಲ್ಲಿ ನಟಿಸುವುದರ ಜೊತೆಗೆ ಸಹಾಯಕ ನಿರ್ದೇಶಕಾಗಿ ಕೆಲಸ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT