ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಲಲಿತಾ ನಿಧನ

Last Updated 23 ಫೆಬ್ರುವರಿ 2022, 6:56 IST
ಅಕ್ಷರ ಗಾತ್ರ

ತಿರುವನಂತಪುರ: ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಲಲಿತಾ ಅವರು ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಅವರು ಮಂಗಳವಾರ ರಾತ್ರಿ ನಿಧನರಾದರು. ಅವರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಲಲಿತಾ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಕೇರಳದ ರಾಜಕೀಯ ನಾಯಕರು, ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

ಲಲಿತಾ ಅವರು ‘ಕೇರಳ ಪೀಪಲ್ಸ್​ ಆರ್ಟ್​ ಕ್ಲಬ್​’ ರಂಗತಂಡದ ಮೂಲಕ ಚಿತ್ರರಂಗ ಪ್ರವೇಶ ಮಾಡಿದ್ದರು. ಪ್ರತಿಭಾವಂತ ನಟಿ ಆಗಿದ್ದ ಲಲಿತಾ 550ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು.

ರಾಷ್ಟ್ರ ಪ್ರಶಸ್ತಿ, ಕೇರಳ ರಾಜ್ಯ ಪ್ರಶಸ್ತಿ, ಫಿಲ್ಮ್​ಫೇರ್ ಪ್ರಶಸ್ತಿ,​ ಜೀವಮಾನ ಸಾಧನೆ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳುಲಲಿತಾ ಅವರಿಗೆ ಸಂದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT