ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತೀವ್ರ ಜ್ವರ, ಉಸಿರಾಟದ ಸಮಸ್ಯೆ: ಮಲಯಾಳಂ ನಟ ಮೋಹನ್‌ಲಾಲ್‌ ಆಸ್ಪತ್ರೆಗೆ ದಾಖಲು

Published : 18 ಆಗಸ್ಟ್ 2024, 12:47 IST
Last Updated : 18 ಆಗಸ್ಟ್ 2024, 12:47 IST
ಫಾಲೋ ಮಾಡಿ
Comments

ನವದೆಹಲಿ: ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಅವರು ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವಿನಿಂದ ಬಳಲುತ್ತಿದ್ದು, ಕೊಚ್ಚಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೋಹನ್‌ಲಾಲ್ ಅವರನ್ನು ಕೊಚ್ಚಿಯ ಅಮೃತ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ಗೆ ದಾಖಲಿಸಲಾಗಿದೆ. ತಪಾಸಣೆ ಬಳಿಕ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

‘64 ವರ್ಷ ಮೋಹನ್‌ಲಾಲ್ ಅವರಿಗೆ ತೀವ್ರ ಜ್ವರ, ವೈರಲ್ ಉಸಿರಾಟದ ಸೋಂಕು ತಗುಲಿರುವ ಸಾಧ್ಯತೆ ಇದೆ. ಹಾಗಾಗಿ ಮುಂದಿನ ಕೆಲವು ದಿನಗಳ ಕಾಲ ಅನಗತ್ಯ ಓಡಾಟ ತಪ್ಪಿಸುವುದರ ಜತೆಗೆ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದೆ’ ಎಂದು ಡಾ. ಕೆ.ಪಿ. ಗಿರೀಶ್ ಕುಮಾರ್ ತಿಳಿಸಿದ್ದಾರೆ.

ಈಚೆಗೆ ಮೋಹನ್‌ಲಾಲ್‌ ಅವರು ಕೇರಳದ ವಯನಾಡ್‌ ಜಿಲ್ಲೆಯ ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಮೋಹನ್‌ಲಾಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT