ಗುರುವಾರ , ಸೆಪ್ಟೆಂಬರ್ 23, 2021
21 °C

ಪತ್ನಿ ಶಾಲಿನಿ ಮಾಡಿರುವ ಆರೋಪ‌ದಲ್ಲಿ ಹುರುಳಿಲ್ಲ –ಹನಿ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪತ್ನಿ ಶಾಲಿನಿ ಮಾಡಿರುವ ಆರೋದಲ್ಲಿ ಯಾವುದೇ ಹುರುಳಿಲ್ಲ ಎಂದು ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಯೋ ಯೋ ಹನಿ ಸಿಂಗ್‌ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ಹನಿ ಸಿಂಗ್‌ ಸ್ಪಷ್ಟನೆ ನೀಡಿದ್ದು ಶಾಲಿನಿ ತಲ್ವಾರ್‌ ಅವರ ಆರೋಪ ದುರುದ್ದೇಶದಿಂದ ಕೂಡಿದೆ ಎಂದು ಹೇಳಿದ್ದಾರೆ. 

ಶಾಲಿನಿ ತಲ್ವಾರ್ ಕೌಟುಂಬಿಕ ದೌರ್ಜನ್ಯ ಕಾಯ್ದೆ ಅಡಿ ಹನಿ ಸಿಂಗ್‌ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದರು. ದೂರಿನಲ್ಲಿ ಮಾನಸಿಕ ಕಿರುಕುಳ, ದೈಹಿಕ ಹಲ್ಲೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

 ಕಳೆದ 20 ವರ್ಷಗಳಿಂದ ನನ್ನ ಮತ್ತು ನಮ್ಮ ಕುಟುಂಬದ ಜತೆಯಲ್ಲಿರುವ ಶಾಲಿನಿ ನನ್ನ ವಿರುದ್ಧ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ, ಅವರು ದುರುದ್ದೇಶದಿಂದ ಸುಳ್ಳು ಆರೋಪ ಮಾಡಿದ್ದರೆ. ಈ ಘಟನೆ ನನ್ನ ಮನಸ್ಸಿಗೆ ತೀವ್ರ ನೋವುಂಟ ಮಾಡಿದೆ ಎಂದು ಹೇಳಿದ್ದಾರೆ. 
  
ನನ್ನ ವೃತ್ತಿ ಬದುಕಿನಲ್ಲಿ ಎದುರಿಸಿದ ಆರೋಪ ಅಥವಾ ವಿವಾದಗಳಿಗೆ ನಾನು ಎಂದೂ ಪ್ರತಿಕ್ರಿಯೆ ನೀಡಿರಲಿಲ್ಲ ಆದರೆ ಶಾಲಿನಿ ನನ್ನ ಕುಟುಂಬದವರು ಬಗ್ಗೆ ಆರೋಪ ಮಾಡಿದಾಗ ನನ್ನಿಂದ ಸುಮ್ಮನಿರಲು ಸಾಧ್ಯವಾಗಲಿಲ್ಲ ಎಂದು ಪೋಸ್ಟ್‌ನಲ್ಲಿ ಹೇಳಿದ್ದಾರೆ. 

ದೇಶದ ಕಾನೂನು ವ್ಯವಸ್ಥೆ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಸಾಧ್ಯವಾದಷ್ಟು ಬೇಗ ಸತ್ಯಾಂಶ ಹೊರಗೆ ಬರಲಿ ಎಂದು ದೇವರಲ್ಲಿ ಬೇಡುತ್ತೇನೆ. ನ್ಯಾಯಾಲಯ ಕೂಡ ನನ್ನ ಹೇಳಿಕೆ ದಾಖಲಿಸಲು ಅವಕಾಶ ಕೊಟ್ಟಿದೆ. ಅಭಿಮಾನಿಗಳು ಹಾಗೂ ಜನರು ಈಗಲೇ ನನ್ನ ಕುಟುಂಬದ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಬರಾದು ಎಂದು ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು