ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಂಡೇಲಾ’ನಾದ ಸ್ಮೈಲ್ ಶ್ರೀನು

Published 6 ಜೂನ್ 2024, 23:47 IST
Last Updated 6 ಜೂನ್ 2024, 23:47 IST
ಅಕ್ಷರ ಗಾತ್ರ

ಈ ಹಿಂದೆ ‘ಓ ಮೈ ಲವ್’, ‘ಬಳ್ಳಾರಿ ದರ್ಬಾರ್’ ಮೊದಲಾದ ಚಿತ್ರಗಳಲ್ಲಿ ನಟಿಸಿದ್ದ ಸ್ಮೈಲ್ ಶ್ರೀನು ‘ಮಂಡೇಲಾ’ನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಶ್ರೀಧರ್ ಪೂರ್ವಜಿತ್ ಈ ಚಿತ್ರದ ನಿರ್ದೇಶಕರು. ಶ್ರೀಲಕ್ಷ್ಮಿ ನರಸಿಂಹ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ.

‘1980- 90ರ ದಶಕದಲ್ಲಿನ ಸೂಕ್ಷ್ಮ ಹಾಗೂ ಸುಂದರವಾದ ಭಾವನೆಗಳ ಸುತ್ತ ನಡೆಯುವ ಕಥೆ. ಇಬ್ಬರು ನಾಯಕಿಯರಿದ್ದು ಹುಡುಕಾಟ ನಡೆದಿದೆ. ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಜುಲೈ ಮೊದಲ ವಾರದಿಂದ ಚಿತ್ರೀಕರಣ ಪ್ರಾರಂಭವಾಗಲಿದೆ’ ಎನ್ನುತ್ತಾರೆ ನಿರ್ದೇಶಕರು.

ಉಳಿದ ತಂತ್ರಜ್ಞರಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಚಿತ್ರತಂಡ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT