ಗುರುವಾರ , ಸೆಪ್ಟೆಂಬರ್ 23, 2021
28 °C

ನಟಿ ಮಂದಿರಾ ಬೇಡಿ ಪತಿ ರಾಜ್​ ಕೌಶಲ್ ಹೃದಯಾಘಾತದಿಂದ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ ನಟಿ, ಕಿರುತೆರೆ ನಿರೂಪಕಿ ಮಂದಿರಾ ಬೇಡಿ ಅವರ ಪತಿ, ನಿರ್ಮಾಪಕ ಹಾಗೂ ನಿರ್ದೇಶಕ ರಾಜ್‌ ಕೌಶಲ್‌ ಬುಧವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 49 ವರ್ಷ ವಯಸ್ಸಾಗಿತ್ತು.

ನಟ ರೋಹಿತ್ ರಾಯ್ ಟ್ವೀಟ್‌ ಮಾಡಿ, ಇಂದು ಬೆಳಗ್ಗೆ ರಾಜ್‌ ಕೌಶಲ್‌ ನಮ್ಮನ್ನು ಅಗಲಿದರು ಎಂದು ಟ್ವೀಟ್‌ ಮಾಡಿದ್ದಾರೆ. 2005ರಲ್ಲಿ ತೆರೆಕಂಡ ‘ ಮೈ ಬ್ರದರ್‌ ನಿಖಿಲ್‌‘ ಸಿನಿಮಾದಲ್ಲಿ ನಾನು ಕೌಶಲ್ ಜೊತೆ ಕೆಲಸ ಮಾಡಿದ್ದೆ ಎಂದು ರೋಹಿತ್‌ ರಾಯ್‌ ನೆನಪಿಸಿಕೊಂಡಿದ್ದಾರೆ. 

ರಾಜ್‌ ಕೌಶಲ್‌ ನಿಧನಕ್ಕೆ ಬಾಲಿವುಡ್‌ನ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು