ಮಳವಳ್ಳಿ: ಕರ್ನಾಟಕ ರತ್ನ ಡಾ.ರಾಜಕುಮಾರ್ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ನೀಡಿರುವ ಭೂಮಿಯ ಬಗ್ಗೆ ಪ್ರಶ್ನೆ ಮಾಡಿರುವ ನಟ ಚೇತನ್ ಡಾ. ರಾಜ ಕುಮಾರ್ ಅವರ ಪುಣ್ಯ ಭೂಮಿ ಬಳಿ ಕ್ಷಮೆಯಾಚಿಸಬೇಕು ಎಂದು ಡಾ.ರಾಜ್ ಕುಮಾರ್ ಕಲಾ ಸಂಘದ ಅಧ್ಯಕ್ಷ ದೊಡ್ಡಯ್ಯ ಆಗ್ರಹಿಸಿದರು.

ಭಾನುವಾರ ಅವರು ಮಾತನಾಡಿ, ಕನ್ನಡ ಚಿತ್ರರಂಗಕ್ಕೆ ಮಾತ್ರ ಸೀಮಿತಗೊಳ್ಳದೇ ಭಾಷೆ, ನಾಡು, ನುಡಿ, ಸಂಸ್ಕೃತಿಗೆ ದೊಡ್ಡ ಕೊಡುಗೆ ನೀಡಿರುವ ಕರ್ನಾಟಕ ರತ್ನ ರಾಜಕುಮಾರ್ ನಮ್ಮ ರಾಜ್ಯದ ಸಾಂಸ್ಕೃತಿಕ ಅಸ್ಮಿತೆಯಾಗಿದ್ದಾರೆ. ಅವರ ಸ್ಮಾರಕ ನಿರ್ಮಾಣದ ಜಾಗದ ಬಗ್ಗೆ ಪ್ರಶ್ನೆ ಎತ್ತಿರುವ ಚೇತನ್ ಅವರು ತಮ್ಮ ಮನೆಯಲ್ಲಿ ಕ್ಷಮೆಯಾಚನೆ ಮಾಡಿರುವುದನ್ನು ಅಭಿಮಾನಿಗಳು ಒಪ್ಪುವುದಿಲ್ಲ ಎಂದು ಹೇಳಿದರು.

ಅಂದಿನ ಕಾಲಘಟ್ಟದಲ್ಲಿ ರಾಜಕುಮಾರ್ ರಾಜಕೀಯ ಪ್ರವೇಶ ಮಾಡಿದ್ದರೆ ರಾಜ್ಯದ ಮುಖ್ಯಮಂತ್ರಿ ಆಗಬಹುದಿತ್ತು. ಆದರೆ ರಾಜಕೀಯದಿಂದ ದೂರ ಉಳಿದು ಕಲಾ ಸೇವೆಗೆ ನಿರಂತರವಾಗಿ ಹೋರಾಟ ನಡೆಸಿದ್ದರು ಎಂದರು.

ರಾಶಿರಾಪು ಸೇನಾ ಸಮಿತಿ ಅಧ್ಯಕ್ಷ ಕೃಷ್ಣ, ಎಂ.ವಿ.ಶೇಮಶೇಖರ್, ಅಜ್ಮಿತ್ ಉಲ್ಲಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-40-1727869981

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.