ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ ‘ಗಜಾನನ ಕ್ರಿಕೆಟರ್ಸ್’ (ಜಂತೊಟ್ಟು ಸಿನ್ಸ್ 1983) ತುಳು ಚಲನಚಿತ್ರವು ಕರಾವಳಿಯಲ್ಲಿ ಬಿಡುಗಡೆಗೊಂಡಿತು.

ಭಾರತ್ ಸಿನಿಮಾಸ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗ ನಿರ್ದೇಶಕ ವಿಜಯ ಕುಮಾರ್ ಕೊಡಿಯಲ್ ಬೈಲ್ ಮಾತನಾಡಿ, ತುಳು ಸಿನಿಮಾರಂಗದಲ್ಲಿ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ಕಿರಿಯರು, ಹೊಸಬರು ಮಿಂಚುತ್ತಿದ್ದಾರೆ. ಯುವ ಪ್ರತಿಭಾವಂತರು ಸಿನಿಮಾರಂಗದಲ್ಲಿ ಬೌಂಡರಿ, ಸಿಕ್ಸರ್ ಬಾರಿಸುವ ಮೂಲಕ ಚೆನ್ನಾಗಿ ಆಡಲಿ ಎಂದರು.

ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಉದ್ಯಮಿ ಮೈಕಲ್ ಡಿಸೋಜ, ಕಲಾ ನಿರ್ದೇಶಕ ತಮ್ಮಲಕ್ಷ್ಮಣ, ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು, ತೋನ್ಸೆ ಪುಷ್ಕಳ್ ಕುಮಾರ್, ಭೋಜರಾಜ್ ವಾಮಂಜೂರು, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಪ್ರಸನ್ನ ಶೆಟ್ಟಿ ಬೈಲೂರು, ಲಂಚುಲಾಲ್, ನವೀನ್ ಶೆಟ್ಟಿ ಆರ್ಯನ್, ದಯಾನಂದ ಹೆಜಮಾಡಿ, ನವೀನ್ ಶೆಟ್ಟಿ ಎಡ್ಮೆಮಾರ್, ವಿನೀತ್ ಕುಮಾರ್, ನಿರ್ದೇಶಕ ಕೀರ್ತನ್ ಭಂಡಾರಿ, ನಿರ್ಮಾಪಕ ಪ್ರಜ್ವಲ್ ಶೆಟ್ಟಿ, ಸಹನಿರ್ಮಾಪಕ ರೋಹನ್ ಪಿರೇರಾ, ಸಂತೋಷ್ ಲಾಡ್, ಶೈಲಶ್ರಿ ಮುಲ್ಕಿ, ರೂಪಾ ವರ್ಕಾಡಿ, ಅನ್ವಿತಾ ಸಾಗರ, ಸಮತಾ ಅಮೀನ್, ಸಂಗೀತ ನಿರ್ದೇಶಕ ಸೃಜನ್ ಕುಮಾರ್ ತೋನ್ಸೆ ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.

ಸ್ಪೀಕರ್ ಯು.ಟಿ.ಖಾದರ್ ಭೇಟಿ ನೀಡಿ ಶುಭ ಹಾರೈಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-29-734295181

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.