ಮಂಗಳೂರು: ‘ಎಂಎನ್ಆರ್ ಪ್ರೊಡಕ್ಷನ್ನಲ್ಲಿ ನಿರ್ಮಾಣವಾಗುತ್ತಿರುವ ‘ವಾದಿರಾಜ ವಾಲಗ ಮಂಡಳಿ’ ಹಾಸ್ಯಮಯ ಕನ್ನಡ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಆಗಸ್ಟ್ನಲ್ಲಿ ರಾಜ್ಯದಾದ್ಯಂತ ತೆರೆ ಕಾಣಲಿದೆ’ ಎಂದು ಸಿನಿಮಾದ ನಿರ್ಮಾಪಕ ಎಂ.ಎನ್. ರಾಜೇಂದ್ರಕುಮಾರ್ ಮಂಗಳವಾರ ಇಲ್ಲಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ವಿಭಿನ್ನ ಕಥಾಹಂದರ, ವಿಶಿಷ್ಟ ಶೀರ್ಷಿಕೆ, ಕಲಾವಿದರ ಹೊಸ ಗೆಟಪ್ ಸಿನಿಮಾದ ಪ್ರಮುಖ ಆಕರ್ಷಣೆಗಳಾಗಿವೆ. ‘ವರಾಹ ರೂಪಂ’ ಖ್ಯಾತಿಯ ಶಶಿರಾಜ್ ಕಾವೂರು, ಚಿತ್ರದ ಕಥೆ, ಸಂಭಾಷಣೆ ಹಾಗೂ ನಿರ್ದೇಶನ ಮಾಡಿದ್ದಾರೆ. ಒಟ್ಟು 50 ದಿನಗಳ ಕಾಲ ಎರಡು ಹಂತಗಳಲ್ಲಿ ಚಿತ್ರೀಕರಣ ನಡೆದಿದೆ. ಚಿತ್ರವು ಹಾಸ್ಯ, ಭಾವನಾತ್ಮಕ ಸಂಗತಿಗಳು, ಸಾಮಾಜಿಕ ಹಿನ್ನೆಲೆಯ ಮಿಶ್ರ ಅನುಭವ ನೀಡಲಿದೆ. ಈ ಸಿನಿಮಾವನ್ನು ತಮಿಳು, ತೆಲಗು ಹಾಗೂ ಮಲೆಯಾಳ ಭಾಷೆಗಳಲ್ಲಿ ಬಿಡುಗಡೆ ಮಾಡುವ ಯೋಚನೆಯಿದೆ’ ಎಂದರು.

ನವೀನ್ ಡಿ. ಪಡೀಲ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪ್ರಕಾಶ್ ತುಮಿನಾಡು, ಮೈಮ್ ರಾಮದಾಸ್, ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳಾರ್ ವಿಭಿನ್ನ ಪಾತ್ರಗಳಲ್ಲಿ ಹಾಸ್ಯದ ಹೊನಲು ಹರಿಸಿದ್ದಾರೆ. ನಾಯಕ ನಟರಾಗಿ ಅರ್ಜುನ್ ವೇದಾಂತ, ಅಥರ್ವ ಪ್ರಕಾಶ್, ನಟಿಯರಾಗಿ ತನ್ವಿ ರಾವ್, ವೇನ್ಯ ರೈ ಅಭಿನಯಿಸಿದ್ದಾರೆ ಎಂದರು.

ಕ್ಯಾಮೆರಾದಲ್ಲಿ ಎಸ್. ಚಂದ್ರಶೇಖರನ್, ಸಂಗೀತ ಸಂಯೋಜನೆ ಮಣಿಕಾಂತ್ ಕದ್ರಿ, ಸಾಹಸ ನಿರ್ದೇಶನ ಟೈಗರ್ ಶಿವು, ಸಹ ನಿರ್ಮಾಪಕರಾಗಿ ಜಯಪ್ರಕಾಶ್ ತುಂಬೆ, ಕಾರ್ಯಕಾರಿ ನಿರ್ಮಾಪಕರಾಗಿ ಸಂತೋಷ್ ಶೆಟ್ಟಿ, ಪ್ರೊಡಕ್ಷನ್ ಮ್ಯಾನೇಜರ್ ಆಗಿ ರಾಜೇಶ್ ಕುಡ್ಲ, ಕಾರ್ತಿಕ ಸಹಕರಿಸಿದ್ದಾರೆ. ಕರಾವಳಿಯ ನೈಜತೆಯೊಂದಿಗೆ ಸಿನಿಮಾ ಎಲ್ಲ ವರ್ಗದ ಪ್ರೇಕ್ಷಕರಿಗೆ ಇಷ್ಟವಾಗಬಹುದೆಂಬ ಭರವಸೆ ಇದೆ ಎಂದರು.

ಚಿತ್ರದ ಸಹ ನಿರ್ಮಾಪಕ ಮೇಘರಾಜ್ ಜೈನ್, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್ , ಶಶಿಕುಮಾರ್ ರೈ ಬಾಲ್ಯೊಟ್ಟು, ದೇವಿಪ್ರಸಾದ್ ಶೆಟ್ಟಿ ಬೆಳಪು, ಅಶೋಕ್ ಕುಮಾರ್ ಶೆಟ್ಟಿ, ಎಸ್.ಬಿ. ಜಯರಾಮ್ ರೈ, ರಾಜೇಶ್ ರಾವ್, ಎಸ್.ಎನ್. ಮನ್ಮಥ, ಕುಶಾಲಪ್ಪ ಗೌಡ, ಕಲಾವಿದರಾದ ಗೋಪಿನಾಥ್ ಭಟ್, ಲಕ್ಷ್ಮಣ್ ಕುಮಾರ್ ಮಲ್ಲೂರು, ಶೋಭರಾಜ್ ಪಾವೂರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-29-2013705908

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.