ಮಂಗಳೂರು: ಇಲ್ಲಿನ ಸ್ಯಾಂಡಿಸ್ ಕಂಪನಿ ವತಿಯಿಂದ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ನ ಐದನೇ ಆವೃತ್ತಿಯ ಜೀವಮಾನ ಸಾಧನೆ ಪ್ರಶಸ್ತಿಗೆ ನಟಿ ಸರೋಜಿನಿ ಶೆಟ್ಟಿ ಅವರನ್ನು ಹಾಗೂ ವರ್ಸಟೈಲ್ ನಟ ಪ್ರಶಸ್ತಿಗೆ ನಟ ದೇವದಾಸ ಕಾಪಿಕಾಡ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಂಪನಿಯ ಮಾಲೀಕ ಸಂದೇಶ್ ರಾಜ್ ಬಂಗೇರ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾಹಿತಿ ನೀಡಿದ ಅವರು, ‘ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ನ ಐದನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭ ಮೂಲ್ಕಿ ಕೊಲ್ನಾಡಿನ ಸುಂದರರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್ನಲ್ಲಿ ಇದೇ 24ರಂದು ಮಧ್ಯಾಹ್ನ 3ರಿಂದ ನಡೆಯ ಲಿದೆ. ಸಂಗೀತ ನಿರ್ದೇಶಕ ಗುರುಕಿರಣ್, ಕನ್ನಡ ಸಿನಿಮಾ ನಿರ್ದೇಶಕ ತರುಣ್ ಸುಧೀರ್, ನಟಿ ಸೋನಲ್ ಮೊಂತೆರೊ, ನಿರ್ಮಾಪಕಿ ಶಿಲ್ಪಾ ಗಣೇಶ್, ನಟ ತ್ರಿವಿಕ್ರಮ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಎ. ಕೋಟ್ಯಾನ್, ಮೈಂಡ್ ಮೆಕ್ಯಾನಿಸಂ ಸ್ಥಾಪಕ ಶ್ರೀನಾಥ್ ಶೆಟ್ಟಿ, ಅಸ್ತ್ರ ಗ್ರೂಪ್ ಸಂಸ್ಥಾ ಪಕ ಲಂಚುಲಾಲ್ ಕೆ.ಎಸ್, ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್’ ಎಂದರು.

‘ತುಳು ಚಿತ್ರರಂಗದ ನಟ ನಟಿಯರು ಮತ್ತು ಸಿಸಿಲಿಂಗ್ ಗಯ್ಸ್ ತಂಡದವರ ನೃತ್ಯ, ರಸಮಂಜರಿ ಹಾಗೂ ಕಾಮಿಡಿ ಕಾರ್ಯಕ್ರಮಗಳನ್ನು ಪ್ರಸ್ತುತಿ ಪಡಿಸಲಿದ್ದಾರೆ. ಸಾರ್ವಜನಿಕರಿಗೆ ಉಚಿತ ಪ್ರವೇಶ ಇದೆ. ತುಳು ಸಿನಿಮಾ ಕಲಾವಿದರು, ನಿರ್ಮಾಪಕರು, ತಂತ್ರಜ್ಞರು, ಹಿರಿಯ ಮತ್ತು ಕಿರಿಯ ನಟ-ನಟಿಯರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಶರ್ಮಿಳಾ ಅಮೀನ್ ಮತ್ತು ವಿನೀತ್ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ’ ಎಂದರು.

‘2025ರಲ್ಲಿ ತೆರೆಕಂಡಿರುವ ಒಟ್ಟು 8 ಸಿನಿಮಾಗಳು ಸ್ಪರ್ಧೆಯಲ್ಲಿವೆ. ಒಟ್ಟು 30 ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಮೂವರು ವಿಶೇಷ ತೀರ್ಪುಗಾರರು ಈ ಆಯ್ಕೆ ನಡೆಸಲಿದ್ದಾರೆ’ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ಬೈಲ್, ಸಚಿನ್ ಉಪ್ಪಿನಂಗಡಿ, ಸಾತ್ವಿಕ್ ಹಾಗೂ ಯಶ್ ರಾಜ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-29-854228078

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.