ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ.30ಕ್ಕೆ ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಬಿಡುಗಡೆ

Last Updated 3 ಮಾರ್ಚ್ 2022, 6:26 IST
ಅಕ್ಷರ ಗಾತ್ರ

ಚೆನ್ನೈ: ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್​ ಸೆಲ್ವನ್’ ಚಿತ್ರದ ಮೊದಲ ಭಾಗವು ಸೆ.30ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

1955ರಲ್ಲಿ ಕಲ್ಕಿ ಕೃಷ್ಣಮೂರ್ತಿಯವರು ರಚಿಸಿದ ರಾಜ ಅರುಲ್ಮೋಳಿವರ್ಮನ್ ಅವರ ಜೀವನಚರಿತ್ರೆ ಒಳಗೊಂಡಿರುವ ಕಾದಂಬರಿ ಆಧರಿಸಿ ‘ಪೊನ್ನಿಯಿನ್​ ಸೆಲ್ವನ್’ ಸಿನಿಮಾ ಸಿದ್ಧಪಡಿಸಲಾಗುತ್ತಿದೆ.

ಈ ಚಿತ್ರದಲ್ಲಿ ತಮಿಳು ಮತ್ತು ಹಿಂದಿ ಚಿತ್ರರಂಗದ ಅನೇಕ ಕಲಾವಿದರು ನಟಿಸಿದ್ದು, ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ. ಚಿತ್ರಕ್ಕೆ ಎ.ಆರ್​. ರೆಹಮಾನ್​ ಸಂಗೀತ ನಿರ್ದೇಶನ ಮಾಡಿದ್ದಾರೆ.

ಈ ಚಿತ್ರವನ್ನು ತಮಿಳಿನ ‘ಲೈಕಾ ಪ್ರೊಡಕ್ಷನ್​’ ನಿರ್ಮಾಣ ಮಾಡುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್‌ಗಳು ಗಮನ ಸೆಳೆಯುತ್ತಿವೆ.

ಚಿತ್ರದಲ್ಲಿ ಬಾಲಿವುಡ್ ನಟಿ ​ ಐಶ್ವರ್ಯಾ ರೈ ಬಚ್ಚನ್, ತ್ರಿಷಾ, ನಟ​ರಾದ ವಿಕ್ರಮ್‌, ಕಾರ್ತಿ, ಪ್ರಕಾಶ್ ರಾಜ್, ಜಯರಾಮ್ ಮೊದಲಾದವರ ದೊಡ್ಡ ತಾರಾಗಣವಿದೆ.

ಓದಿ...ವಿಕ್ರಾಂತ್ ರೋಣ: ಇಂಗ್ಲಿಷ್‌ ಡಬ್ಬಿಂಗ್ ಪೂರ್ಣಗೊಳಿಸಿದ ಸುದೀಪ್; ಭಂಡಾರಿ ಮಾಹಿತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT