ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ: ಬಾಲಿವುಡ್‌ ಮಂದಿಯ ವ್ಯಾಪಕ ಆಕ್ರೋಶ

Published 20 ಜುಲೈ 2023, 10:24 IST
Last Updated 20 ಜುಲೈ 2023, 10:24 IST
ಅಕ್ಷರ ಗಾತ್ರ

ಗುವಾಹಟಿ: ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮೇ 4ರಂದು ನಡೆದಿದ್ದ ಹಿಂಸಾಚಾರದ ವೇಳೆ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಈ ಘಟನೆಯನ್ನು ಬಾಲಿವುಡ್‌ ಸೆಲೆಬ್ರಿಟಿಗಳು ಖಂಡಿಸಿದ್ದಾರೆ.

ಮಹಿಳೆಯರ ಬೆತ್ತಲು ಮೆರವಣಿಗೆ ಮಾಡಿದವರ ವಿರುದ್ಧ ಸರ್ಕಾರ ಕ್ರಮಕೈಗೊಳ್ಳಬೇಕು, ತಪ್ಪಿತಸ್ಥರಿಗೆ ಘೋರ ಶಿಕ್ಷೆಯಾಗಬೇಕು ಎಂದು ಬಾಲಿವುಡ್‌ ನಟ ನಟಿಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಟರಾದ ಅಕ್ಷಯ್ ಕುಮಾರ್, ರಿತೇಶ್ ದೇಶ್​ಮುಖ್​, ಸೋನು ಸೂದ್‌, ವೀರದಾಸ್‌, ನಟಿಯರಾದ ಕಿಯಾರ ಆಡ್ವಾಣಿ, ಊರ್ಮಿಳಾ ಮಾತೋಡ್ಕರ್‌, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸೇರಿ ಹಲವಾರು ಬಾಲಿವುಡ್‌ ಮಂದಿ ಈ ಘಟನೆಯನ್ನು ಖಂಡಿಸಿದ್ದಾರೆ. 

ದೇಶೀಯ ಬುಡಕಟ್ಟು ನಾಯಕರ ವೇದಿಕೆ’ (ಐಟಿಎಲ್‌ಎಫ್) ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯ ಮುನ್ನಾದಿನವೇ ವಿಡಿಯೊ ಬಿಡುಗಡೆ ಮಾಡಲಾಗಿದೆ. ಇಬ್ಬರು ಮಹಿಳೆಯರನ್ನು ಭತ್ತದ ಗದ್ದೆಗೆ ಕರೆದೊಯ್ಯುವ ದುಷ್ಕರ್ಮಿಗಳ ಗುಂಪು ಅವರನ್ನು ಹಿಂಸಿಸುತ್ತಿರುವುದು ವಿಡಿಯೊದಲ್ಲಿ ಕಂಡು ಬಂದಿದೆ. ಮಹಿಳೆಯರು ಸಹಾಯಕ್ಕಾಗಿ ಅಂಗಲಾಚುವುದು ದಾಖಲಾಗಿದೆ.

ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಥೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. 

‘ಸಂತ್ರಸ್ತ ಮಹಿಳೆಯರು ಕುಕಿ-ಜೋ ಬುಡಕಟ್ಟಿಗೆ ಸೇರಿದವರು. ಇಬ್ಬರೂ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಗುರುತು ಬಹಿರಂಗವಾಗುವಂಥ ವಿಡಿಯೊವನ್ನು ದುಷ್ಕರ್ಮಿಗಳು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದು, ಮಹಿಳೆಯರು ಮತ್ತಷ್ಟು ಅಪಮಾನಕ್ಕೆ ಗುರಿಯಾಗಿದ್ದಾರೆ’ ಎಂದು ಐಟಿಎಲ್‌ಎಫ್ ತಿಳಿಸಿದೆ. 

ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಬಳಿಕ ಮತ್ತೆ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT