ಶನಿವಾರ, ಸೆಪ್ಟೆಂಬರ್ 18, 2021
28 °C

ಕಿಚ್ಚ ಸುದೀಪ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರು ಗುರುವಾರ 50ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಇದೇ ಸಂದರ್ಭ ತಮ್ಮ ಆಪ್ತರೊಂದಿಗೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದು, ಬಿಗ್ ಬಾಸ್ ಸೀಸನ್ 8ರ ವಿನ್ನರ್ ಮಂಜು ಪಾವಗಡ ಸಹ ಪಾರ್ಟಿಯಲ್ಲಿ ಪಾಲ್ಗೊಂಡು ತಮ್ಮ ನೆಚ್ಚಿನ ನಟನಿಗೆ ಶುಭ ಕೋರಿದ್ದಾರೆ.

ಸುದೀಪ್ ಹುಟ್ಟುಹಬ್ಬದ ಸಂಭ್ರಮದ ಚಿತ್ರಗಳನ್ನು ಮಂಜು ಪಾವಗಡ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ಸುದೀಪ್ ಮತ್ತು ಅವರ ಪತ್ನಿ ಪ್ರಿಯಾ ಅವರ ಜೊತೆ ನಿಂತು ಮಂಜು ಫೋಟೊ ಕ್ಲಿಕ್ಕಿಸಿಕೊಂಡಿದ್ಧಾರೆ.

ಕಿಚ್ಚನ ಹುಟ್ಟುಹಬ್ಬದ ದಿನದಂದೇ ನಿನ್ನೆ ಬಹುನಿರೀಕ್ಷಿತ ಅವರ ‘ವಿಕ್ರಾಂತ್ ರೋಣ‘ ಚಿತ್ರದ ಗ್ಲಿಮ್ಸ್ ರಿಲೀಸ್ ಆಗಿತ್ತು.

ಟೋಕಿಯೊ ಒಲಿಪಿಂಕ್ಸ್ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ ಸಹ ವಿಡಿಯೊ ಸಂದೇಶದ ಮೂಲಕ ಸುದೀಪ್‌ಗೆ ವಿಶ್ ಮಾಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು