ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಹೇಳನಕಾರಿ ಟ್ವೀಟ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಮನೋಜ್‌ ಭಾಜಪೇಯಿ

Last Updated 25 ಆಗಸ್ಟ್ 2021, 7:42 IST
ಅಕ್ಷರ ಗಾತ್ರ

ತಮ್ಮ ವಿರುದ್ಧದ ಅವಹೇಳನಕಾರಿ ಟ್ವೀಟ್‌ಗೆ ಸಂಬಂಧಿಸಿದಂತೆ ನಟ ಮನೋಜ್‌ ಭಾಜಪೇಯಿ ಅವರು ಇಂದೋರ್‌ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ನಟ ಕಮಾಲ್‌ ಖಾನ್‌ ಅವರು ಮನೋಜ್‌ ಭಾಜಪೇಯಿ ವಿರುದ್ಧ ಅವಹೇಳನಕಾರಿ ಟ್ವೀಟ್‌ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಇಂದೋರ್‌ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ಭಾಜಪೇಯಿ ಪರ ವಕೀಲರು ತಿಳಿಸಿದ್ದಾರೆ.

ಐಪಿಸಿ ಸೆ.500ರ (ಮಾನಹಾನಿ ಮಾಡಿದ್ದಕ್ಕೆ ಶಿಕ್ಷೆ) ಅಡಿಯಲ್ಲಿ ಕಮಾಲ್‌ ಖಾನ್ ವಿರುದ್ಧ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಕ್ರಿಮಿನಲ್ ದೂರು ದಾಖಲಾಗಿದೆ.

ಜುಲೈ 26ರಂದು ಮನೋಜ್‌ ಭಾಜಪೇಯಿ ವಿರುದ್ಧ ಕಮಾಲ್ ಖಾನ್‌ ಅವರು ಅವಹೇಳನಕಾರಿ ಟ್ವೀಟ್‌ ಮಾಡಿದ್ದರು. ಇದು ಭಾಜಪೇಯಿ ಅವರ ಮಾನಹಾನಿಗೆ ಕಾರಣವಾಗಿದೆ ಎಂದು ವಕೀಲರು ತಿಳಿಸಿದ್ದಾರೆ.

ತಮ್ಮ ಹೇಳಿಕೆಯನ್ನು ದಾಖಲಿಸಲು ಭಾಜಪೇಯಿ ಅವರು ನ್ಯಾಯಾಲಯಕ್ಕೆ ಮಂಗಳವಾರ ಹಾಜರಾದರು ಎಂದು ವಕೀಲರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT