‘ಹರಿವು’, ‘ನಾತಿಚರಾಮಿ’, ‘ಆ್ಯಕ್ಟ್–1978’ ಸಿನಿಮಾಗಳ ಖ್ಯಾತಿಯ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಆ್ಯಕ್ಷನ್ ಕಟ್ ಹೇಳಿರುವ ನೈಜ ಘಟನೆ ಆಧಾರಿತ ಸಿನಿಮಾ ‘19.20.21’ ಚಿತ್ರೀಕರಣ ಪೂರ್ಣಗೊಂಡಿದೆ.

‘ಸತತ 51 ದಿನಗಳ ಚಿತ್ರೀಕರಣ, ನೂರಕ್ಕೂ ಹೆಚ್ಚು ದೊಡ್ಡ-ಚಿಕ್ಕ ಮುಖ್ಯ ಪಾತ್ರದಲ್ಲಿ ನಟಿಸಿರುವ ಕಲಾವಿದರ ದಂಡು, ನಾವು ಹೇಳಬೇಕೆಂದು ಬಯಸಿದ, ಈ ನೆಲದ ಕತೆಯೊಂದನ್ನು ಸಿನಿಮಾ ಮಾಡಬೇಕೆನ್ನುವ ನಮ್ಮಾಸೆಯ ಮೊದಲ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ’ ಎಂದು ಫೇಸ್ಬುಕ್ನಲ್ಲಿ ಮಂಸೋರೆ ಪೋಸ್ಟ್ ಮಾಡಿದ್ದಾರೆ. ಚಿತ್ರೀಕರಣ ಪೂರ್ಣಗೊಳಿಸಿರುವ ತಂಡ ಪೋಸ್ಟ್ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿದೆ. ಶೀಘ್ರದಲ್ಲೇ ಸಿನಿಮಾವನ್ನು ಬಿಡುಗಡೆಗೊಳಿಸುತ್ತೇವೆ ಎಂದಿದ್ದಾರೆ ಮಂಸೋರೆ.

ನೈಜ ಘಟನೆ ಆಧರಿಸಿದ ‘19.20.21’ ಸಿನಿಮಾವನ್ನು, ‘ಆ್ಯಕ್ಟ್-1978’ ಸಿನಿಮಾ ನಿರ್ಮಾಣ ಮಾಡಿದ ನಿರ್ಮಾಪಕ ದೇವರಾಜ್ ಆರ್. ಅವರು, ತಮ್ಮ ‘ಡಿ ಕ್ರಿಯೇಷನ್ಸ್’ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಸಿನಿಮಾದ ಪ್ರಮುಖ ಪಾತ್ರದಲ್ಲಿ ಶೃಂಗಾ, ಕೃಷ್ಣಾ ಹೆಬ್ಬಾಳೆ, ಬಾಲಾಜಿ ಮನೋಹರ್, ಸಂಪತ್ ಕುಮಾರ್, ವೆಂಕಟೇಶ್ ಪ್ರಸಾದ್ ಕಾಣಿಸಿಕೊಂಡಿದ್ದು, ಸಿನಿಮಾ ಹಾಗೂ ರಂಗಭೂಮಿಯ ಹಲವು ಕಲಾವಿದರು ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.