ಭಾನುವಾರ, ಆಗಸ್ಟ್ 14, 2022
21 °C

ಮಾಧವನ್‌ ನಟನೆಯ ‘ಮಾರಾ’ ಒಟಿಟಿಯಲ್ಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಿಲೀಪ್‌ ಕುಮಾರ್ ನಿರ್ದೇಶನದ ‘ಮಾರಾ’ ತಮಿಳು ಚಿತ್ರ ಡಿಸೆಂಬರ್ 17ಕ್ಕೆ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ.

ರೊಮ್ಯಾಂಟಿಕ್ ಪ್ರೇಮಕಥೆ ಹೊಂದಿರುವ ಈ ಚಿತ್ರದಲ್ಲಿ ಆರ್‌. ಮಾಧವನ್ ಹಾಗೂ ಕನ್ನಡತಿ ಶ್ರದ್ಧಾ ಶ್ರೀನಾಥ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ಪ್ರಮೋದ್ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ಪ್ರತೀಕ್ ಚಕ್ರವರ್ತಿ ಹಾಗೂ ಶೃತಿ ನಲ್ಲಪ್ಪ ಈ ಚಿತ್ರಕ್ಕೆ ಹಣ ಹೂಡಿಕೆ ಮಾಡಿದ್ದಾರೆ. ಈ ಚಿತ್ರವು 2015ರಲ್ಲಿ ಮಲಯಾಳಂನಲ್ಲಿ ಬಿಡುಗಡೆಯಾದ ‘ಚಾರ್ಲಿ’ ಸಿನಿಮಾದ ರಿಮೇಕ್‌. ಚಿತ್ರಕ್ಕೆ ಘಿಬ್ರನ್‌ ಸಂಗೀತ ಸಂಯೋಜಿಸಿದ್ದಾರೆ. ಎಸ್‌.ಶಿವದಾ, ಮೌಲಿ, ಅಲೆಕ್ಸಾಂಡರ್ ಬಾಬು, ಮಿನನ್‌ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಕೆಲ ದಿನಗಳ ಹಿಂದೆ ಮಾಧವನ್ ಹಾಗೂ ಅನುಷ್ಕಾ ಶೆಟ್ಟಿ ನಟನೆಯ ‘ನಿಶಬ್ದಂ’ ಕೂಡ ಒಟಿಟಿಯಲ್ಲಿ ಬಿಡುಗಡೆಯಾಗಿತ್ತು. ಆದರೆ ಈ ಸಿನಿಮಾ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ಸು ಕಂಡಿರಲಿಲ್ಲ. ಈಗ ಮಾರಾ ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಗುತ್ತದೆಯೇ ಎಂದು ಕಾದು ನೋಡಬೇಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು