ಸೋಮವಾರ, ಅಕ್ಟೋಬರ್ 3, 2022
24 °C

ಮರಾಠಿ ನಟ ಪ್ರದೀಪ್​ ಪಟವರ್ಧನ್ ನಿಧನ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮುಂಬೈ: ಮರಾಠಿ ಚಿತ್ರರಂಗದ ಹಿರಿಯ ನಟ ಪ್ರದೀಪ್ ಪಟವರ್ಧನ್ ಮಂಗಳವಾರ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು.

ಇಲ್ಲಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಪ್ರದೀಪ್ ಪಟವರ್ಧನ್ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಪ್ರದೀಪ್ ಪಟವರ್ಧನ್ ನಿಧನಕ್ಕೆ ಇಡೀ ಮರಾಠಿ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅವರ ಅಭಿಮಾನಿಗಳು ಕೂಡ ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. 

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಟ್ವೀಟ್‌ ಮಾಡಿ ಪ್ರದೀಪ್ ಪಟವರ್ಧನ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 

ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಪ್ರದೀಪ್ ಪಟವರ್ಧನ್ ಪ್ರತಿಭಾವಂತ ಕಲಾವಿದರಾಗಿದ್ದರು. ಮರಾಠಿ ಸಿನಿಮಾಗಳು, ಕಿರುತೆರೆ, ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದರು. ಅವರು ಬಾಲಿವುಡ್ ಸಿನಿಮಾಗಳಿಗೂ ಬಣ್ಣ ಹಚ್ಚಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು