ಗುರುವಾರ , ಅಕ್ಟೋಬರ್ 21, 2021
29 °C

ಕಾರು ಅಪಘಾತದಲ್ಲಿ ಮರಾಠಿ ನಟಿ ಈಶ್ವರಿ ದೇಶಪಾಂಡೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಮರಾಠಿ ಯುವ ನಟಿ ಈಶ್ವರಿ ದೇಶಪಾಂಡೆ (25) ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಗೆಳೆಯ ಶುಭಂ ಡಾಂಗೆ ಜತೆ ಈಶ್ವರಿ ಗೋವಾಗೆ ಪ್ರವಾಸ ಹೋಗಿದ್ದರು. ಕಾರು ಮಂಗಳವಾರ ಗೋವಾದ ಭಾಗಾ ನದಿಗೆ ಉರುಳಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಎಂದು ಗೋವಾ ಪೊಲೀಸರು ಮಾಹಿತಿ ನೀಡಿದ್ದಾರೆ. 

ನೀರಿಗೆ ಬಿದ್ದಾಗ ಕಾರು, ಸೆಂಟ್ರಲ್‌ ಲಾಕ್‌ ಆಗಿದ್ದ ಕಾರಣ ಇಬ್ಬರೂ ಸಹ ಕಾರಿನಿಂದ ಹೊರಗೆ ಬರಲಾಗದೇ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಅವರ ಪೋಷಕರಿಗೆ ಮೃತ ದೇಹಗಳನ್ನು ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈಶ್ವರಿ ಮರಾಠಿ ಸೇರಿದಂತೆ ಹಿಂದಿ ಸಿನಿಮಾದಲ್ಲೂ ನಟಿಸಿದ್ದರು. ಅವರು ನಟಿಸಿದ್ದ ಎರಡು ಮರಾಠಿ ಸಿನಿಮಾಗಳು ಬಿಡುಗಡೆ ಸಿದ್ಧವಾಗಿವೆ. ನಟಿಯ ಅಗಲಿಕೆಗೆ ಮರಾಠಿ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು