ನಾಂದೇಡ್ (ಮಹಾರಾಷ್ಟ್ರ): ಮರಾಠಿ ನಟ ಅಶುತೋಷ್ ಭಾಕ್ರೆ ಮರಾಠವಾಡಪ್ರಾಂತ್ಯದ ನಾಂದೇಡ್ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಿನ್ನೆ ಮಧ್ಯಾಹ್ನ 32 ವರ್ಷದ ಅಶುತೋಷ್ ಅವರ ಶವ ನಾಂದೇಡ್ನ ಗಣೇಶನಗರದ ಫ್ಯಾಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದುಪೊಲೀಸ್ ಮೂಲಗಳು ತಿಳಿಸಿವೆ.

‘ಖುಲ್ತಾ ಕಲಿ ಖುಲೇನಾ’ ಧಾರಾವಾಹಿ ಮೂಲಕ ಖ್ಯಾತಿ ಗಳಿಸಿದ ನಟಿ ಮಯೂರಿ ದೇಶ್ಮುಖ್ ಅವರ ಪತಿ ಅಶುತೋಷ್. ‘ಭಾಕರ್’ ಹಾಗೂ ‘ಇಚಾರ್ ಥರ್ಲಾ ಪಕ್ಕ’ ಮರಾಠಿ ಸಿನಿಮಾಗಳಲ್ಲಿ ನಟಿಸಿದ್ದಾರೆ ಈ ನಟ.

ಆತ್ಮಹತ್ಯೆಗೆ ನಿಖರವಾದ ಕಾರಣಗಳು ತಿಳಿದುಬಂದಿಲ್ಲ ಎಂದಿದ್ದಾರೆ ಪೊಲೀಸರು.

ಆದರೆ ಇವರು ಕಳೆದ ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಅಲ್ಲದೇ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದು ಅದರಲ್ಲಿ ವ್ಯಕ್ತಿಯೊಬ್ಬ ಯಾವ ಕಾರಣಕ್ಕೆ ಸಾಯುತ್ತಾನೆ ಎಂಬುದನ್ನು ವಿಶ್ಲೇಷಿಸಿದ್ದರು ಎನ್ನುತ್ತಿವೆ ಅಧೀಕೃತ ಮೂಲಗಳು.

ನಾಂದೇಡ್ನ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಎಂದು ದೂರು ದಾಖಲಾಗಿದ್ದು, ಸಾವಿನ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.