ಮರಾಠಿ ಸಂಗೀತ ನಿರ್ದೇಶಕ ನರೇಂದ್ರ ಭಿಡೆ ವಿಧಿವಶ

ಮರಾಠಿಯ ಖ್ಯಾತ ಸಂಗೀತ ನಿರ್ದೇಶಕ ನರೇಂದ್ರ ಭಿಡೆ ನಿನ್ನೆ ಹೃದಯಾಘಾತದಿಂದ ಪುಣೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು.
‘ಎ ಪ್ಲೇಯಿಂಗ್ ಘೋಸ್ಟ್, ಬೈಸ್ಕೋಪ್, ಹರಿಶ್ಚಂದ್ರಾಚಿ ಫ್ಯಾಕ್ಟರಿ, ಸಾನೆ ಗುರೂಜಿ, ಸರಿವಾರ್ ಸರಿ, ಚಿ ವಾ ಚಿ ಸೌ ಕಾ’ ಸೇರಿದಂತೆ ಅನೇಕ ಯಶಸ್ವಿ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.
ಇವರು ಮಡದಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇವರ ಅಗಲಿಕೆಗೆ ಮರಾಠಿ ಚಿತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.