ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏ.5ಕ್ಕೆ ದಿಗಂತ್‌, ಸಂಗೀತಾ ಶೃಂಗೇರಿ ಅಭಿನಯದ ‘ಮಾರಿಗೋಲ್ಡ್‌’ ತೆರೆಗೆ

Published 17 ಮಾರ್ಚ್ 2024, 12:44 IST
Last Updated 17 ಮಾರ್ಚ್ 2024, 12:44 IST
ಅಕ್ಷರ ಗಾತ್ರ

ದಿಗಂತ್‌, ಸಂಗೀತಾ ಶೃಂಗೇರಿ ಜೋಡಿಯಾಗಿ ನಟಿಸಿರುವ ‘ಮಾರಿಗೋಲ್ಡ್‌’ ಚಿತ್ರ ಏ.5ರಂದು ತೆರೆಗೆ ಬರುತ್ತಿದೆ. ‘ಗುಣವಂತ’ ಚಿತ್ರದ ನಿರ್ದೇಶಕ ರಘುವರ್ಧನ್‌ ಆ‌ರ್.ವಿ. ಕ್ರಿಯೇಶನ್ಸ್ ಮೂಲಕ ಬಂಡವಾಳ ಹೂಡಿದ್ದಾರೆ. ರಾಘವೇಂದ್ರ ಎಂ.ನಾಯ್ಕ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.  

ಚಿತ್ರದ ‘ಸಿಹಿ ಜೇನ ಮಳೆ ಶುರುವಾಗಿಹುದು’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಈ ಹಾಡಿಗೆ ವೀರ್ ಸಮರ್ಥ್ ಸಂಗೀತ ಸಂಯೋಜಿಸಿದ್ದು, ಯೋಗರಾಜ್‌ ಭಟ್‌ ಸಾಹಿತ್ಯವಿದೆ. 

‘ಈವರೆಗೆ ರೊಮ್ಯಾಂಟಿಕ್ ಕಾಮಿಡಿ ಚಿತ್ರಗಳಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತಿದ್ದ ನಟ ದಿಗಂತ್ ಇಲ್ಲಿ ಮಾಸ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಗೋಲ್ಡ್ ಬಿಸ್ಕೆಟ್‌ ಮಾರಲು ಹೊರಟ ನಾಲ್ವರು ಹುಡುಗರ ಕಥೆ ಇದಾಗಿದ್ದು, ಚಿತ್ರದುರ್ಗ, ಬೆಂಗಳೂರು ಸಕಲೇಶಪುರ ಸುತ್ತಮುತ್ತ ಚಿತ್ರಿಕರಣ ಮಾಡಲಾಗಿದೆ. ಕೋವಿಡ್ ನಂತರದ ಬೆಳವಣಿಗೆಗಳು ಚಿತ್ರ ವಿಳಂಬಕ್ಕೆ ಕಾರಣವಾಯಿತು’ ಎಂದರು ನಿರ್ದೇಶಕರು. 

ಕೆ.ಎಸ್.ಚಂದ್ರಶೇಖರ್‌ ಛಾಯಾಚಿತ್ರಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ರಘು ನಿಡವಳ್ಳಿ  ಸಂಭಾಷಣೆ ಈ ಚಿತ್ರಕ್ಕಿದೆ. ಸಂಪತ್ ಮೈತ್ರೇಯ, ಯಶ್ ಶೆಟ್ಟಿ , ಕಾಕ್ರೋಚ್ ಸುಧೀ, ವಜ್ರಾಂಗ್ ಶೆಟ್ಟಿ, ಬಲರಾಜವಾಡಿ ಮುಂತಾದವರು ತಾರಾಗಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT