ಕನ್ನಡದ ಸೂಪರ್ ಸ್ಟಾರ್ಗಳ ಸಿನಿಮಾ ನಾಳೆ (ಡಿಸೆಂಬರ್ 25) ಒಂದೇ ದಿನ ತೆರೆಗೆ ಬರುತ್ತಿವೆ. ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಹಾಗೂ ಶಿವರಾಜ್ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಸಿನಿಮಾ ಇದೇ ಡಿ.25ಕ್ಕೆ ತೆರೆಗೆ ಬರಲು ಸಿದ್ಧವಾಗಿವೆ. ಕನ್ನಡದ ಜನಪ್ರಿಯ ನಟರ ಸಿನಿಮಾವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
.ಕಿಚ್ಚ ಸುದೀಪ್ ರುದ್ರಾವತಾರ: ಮಾರ್ಕ್ ಸಿನಿಮಾದ ಪವರ್ಫುಲ್ ಕಾಳಿ ಹಾಡು ಬಿಡುಗಡೆ.‘45‘ ಪ್ರೀಮಿಯರ್ ಶೋ: ಜನ್ಯ ನಿರ್ದೇಶನಕ್ಕೆ ಶಿವಣ್ಣ, ರಾಜ್ ಬಿ. ಶೆಟ್ಟಿ ಮೆಚ್ಚುಗೆ.
ಮಾರ್ಕ್, ನಟ ಸುದೀಪ್ ಅಭಿನಯದ 47ನೇ ಸಿನಿಮಾ ಆಗಿದ್ದು, ಚಿತ್ರದಲ್ಲಿ ಅಜಯ್ ಮಾರ್ಕಂಡೆ ಎಂಬ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ. ‘ಮ್ಯಾಕ್ಸ್’ ಚಿತ್ರದ ನಿರ್ದೇಶಕ ವಿಜಯ್ ಕಾರ್ತಿಕೇಯ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ‘ಸತ್ಯಜ್ಯೋತಿ ಫಿಲ್ಮ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಮ್ಯಾಕ್ಸ್ ಸಿನಿಮಾ ಬಳಿಕ ‘ಮಾರ್ಕ್’ ಸಿನಿಮಾದಲ್ಲಿ ನಟ ಸುದೀಪ್ ನಟಿಸಿದ್ದಾರೆ.

ಇದರ ಜೊತೆಗೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದಲ್ಲಿ ಮೂಡಿ ಬಂದಿರುವ ಶಿವರಾಜ್ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಸಿನಿಮಾ ಕೂಡ ನಾಳೆ (ಡಿ.25ರಂದು) ತೆರೆಕಾಣಲಿದೆ. ಈಗಾಗಲೇ ಈ ಸಿನಿಮಾ ಟ್ರೇಲರ್ ಎಲ್ಲರ ಗಮನ ಸೆಳೆದಿದೆ. ಅಲ್ಲದೇ ನಟ ಶಿವರಾಜ್ಕುಮಾರ್ ಅವರು ಮಹಿಳಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಾಗುವಂತೆ ಮಾಡಿದೆ. ಸದ್ಯ ಮಾರ್ಕ್ ಹಾಗೂ 45 ಸಿನಿಮಾ ಒಂದೇ ದಿನ ತೆರೆಗೆ ಬರುತ್ತಿದ್ದು, ಪ್ರೇಕ್ಷಕರು ಹೇಗೆ ಪ್ರತಿಕ್ರಿಯಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.