ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಮಾರ್ಟಿನ್’ ಟ್ರೇಲರ್‌ ಬಿಡುಗಡೆ: ಧ್ರುವ ಸರ್ಜಾ ಅಬ್ಬರ, ಅಭಿಮಾನಿಗಳ ಸಂಭ್ರಮ...

Published : 6 ಆಗಸ್ಟ್ 2024, 4:39 IST
Last Updated : 6 ಆಗಸ್ಟ್ 2024, 4:39 IST
ಫಾಲೋ ಮಾಡಿ
Comments

ಬೆಂಗಳೂರು: ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

ನಿನ್ನೆ ಮುಂಬೈನಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಚಿತ್ರದ ಟ್ರೇಲರ್‌ ಬಿಡುಗಡೆಮಾಡಲಾಗಿದೆ. ಕನ್ನಡ ಸೇರಿದಂತೆ ಅರೆಬಿಕ್, ಕೊರಿಯನ್, ಬಂಗಾಲಿ ಸೇರಿ 13 ಭಾಷೆಗಳಲ್ಲಿ ಟ್ರೇಲರ್‌ ಬಿಡುಗಡೆಯಾಗಿರುವುದು ವಿಶೇಷ.

ಭಾರತ ಮತ್ತು ಪಾಕಿಸ್ತಾನ ನಡುವಿನ ಕಥೆಯಲ್ಲಿ ದೇಶಭಕ್ತಿಯ ಎಳೆಯನ್ನು ಹೊಂದಿರುವ ಚಿತ್ರವಾಗಿದೆ. ಟ್ರೇಲರ್‌ನಲ್ಲಿ ಧ್ರುವ ಸರ್ಜಾ ಕಟ್ಟುಮಸ್ತಾಗಿ ಕಾಣಿಸಿಕೊಂಡಿದ್ದಾರೆ. ಅವರ ನಟನೆಯ ಅಬ್ಬರ ಧ್ರುವ ಅಭಿಮಾನಿಗಳಿಗೆ ಇಷ್ಟವಾಗಿದ್ದು, ಅಭಿಮಾನಿಗಳಿಗೆ ಚಿತ್ರದ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಚಿತ್ರಕ್ಕೆ ರವಿ ಬಸ್ರೂರು ಸಂಗೀತ, ಸತ್ಯ ಹೆಗಡೆ ಛಾಯಾಚಿತ್ರಗ್ರಹಣವಿದೆ. ವೈಭವಿ ಶಾಂಡಿಲ್ಯ ಚಿತ್ರದ ನಾಯಕಿಯಾಗಿದ್ದಾರೆ. ಎ.ಪಿ. ಅರ್ಜುನ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಉದಯ್‌ ಮೆಹ್ತಾ ಬಂಡವಾಳ ಹೂಡಿದ್ದಾರೆ.

ಇದೀಗ ಚಿತ್ರ ‘ಮಾರ್ಟಿನ್’ ಪ್ಯಾನ್‌ ಇಂಡಿಯಾವನ್ನು ದಾಟಿ ಜಾಗತಿಕ ಮಟ್ಟದತ್ತ ಹೊರಟಿದೆ. ಅಕ್ಟೋಬರ್​ 11ರಂದು ಚಿತ್ರ ತೆರೆಗೆ ಬರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT