ಶುಕ್ರವಾರ, ಜನವರಿ 27, 2023
27 °C

ರವೀಂದ್ರ ವೆಂಶಿ ನಿರ್ದೇಶನದ ‘ಮಠ‘ ನ.18ಕ್ಕೆ ತೆರೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುರುಪ್ರಸಾದ್ ನಿರ್ದೇಶನದ ಸೂಪರ್ ಹಿಟ್ ಸಿನಿಮಾ ‘ಮಠ’ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಅದೇ ಹೆಸರಲ್ಲಿ ಬರೋಬ್ಬರಿ 16 ವರ್ಷಗಳ ನಂತರ ಹೊಸದೊಂದು ಸಿನಿಮಾ ನಿರ್ಮಾಣವಾಗಿ ನವೆಂಬರ್‌ 18ರಂದು ತೆರೆಗೆ ಬರಲಿದೆ. ನಿರ್ದೇಶಕ ರವೀಂದ್ರ ವೆಂಶಿ ನಿರ್ದೇಶನ ಸಾರಥ್ಯದ ಬಹು ತಾರಾಗಣ ಒಳಗೊಂಡ ‘ಮಠ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ಟ್ರೇಲರ್ ಭರವಸೆ ಮೂಡಿಸುವಂತಿದೆ. ಕುತೂಹಲವನ್ನೂ ಹುಟ್ಟು ಹಾಕಿದೆ. ಫಿಲಾಸಫಿಕಲ್ ಹಾಗೂ ಹಾಸ್ಯ ಮಿಶ್ರಿತ ಕಥಾಹಂದರ ಸಿನಿಮಾದಲ್ಲಿದೆ. ಕರ್ನಾಟಕದಲ್ಲಿರುವ ಮಠಗಳ ಬಗ್ಗೆ ಹಾಗೂ ಅಲ್ಲಿ ನಡೆದ ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ನಿರ್ದೇಶಕ ರವೀಂದ್ರ ವೆಂಶಿ ಚಿತ್ರಕಥೆ ಹೆಣೆದು ನಿರ್ದೇಶನ ಮಾಡಿದ್ದಾರೆ. ರವೀಂದ್ರ ವೆಂಶಿ ‘ಪುಟಾಣಿ ಸಫಾರಿ’, ‘ವರ್ಣಮಯ’, ‘ವಾಸಂತಿ ನಲಿದಾಗ’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

ವಿ.ಆರ್. ಕಂಬೈನ್ಸ್ ಬ್ಯಾನರ್ ಅಡಿ ಆರ್.ರಮೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಬಹು ತಾರಾಗಣ ಒಳಗೊಂಡ ಈ ಚಿತ್ರದಲ್ಲಿ ಸಂತೋಷ್ ದಾವಣಗೆರೆ ನಾಯಕ ನಟನಾಗಿ ನಟಿಸಿದ್ದಾರೆ. ಸಾಧುಕೋಕಿಲ, ರಮೇಶ್ ಭಟ್, ತಬಲ ನಾಣಿ, ಶರತ್ ಲೋಹಿತಾಶ್ವ, ಬ್ಯಾಂಕ್ ಜನಾರ್ದನ್‌, ರಾಜು ತಾಳಿಕೋಟೆ, ಮಂಡ್ಯ ರಮೇಶ್, ಗುರುಪ್ರಸಾದ್, ಬಿರಾದರ್ ಒಳಗೊಂಡ ತಾರಾಗಣವಿದೆ. ಜೀವನ್ ಗೌಡ ಛಾಯಾಗ್ರಾಹಣ, ಸಿ. ರವಿಚಂದ್ರನ್ ಸಂಕಲನ, ಶ್ರೀ ಗುರು ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಯೋಗರಾಜ್ ಭಟ್, ವಿ.ನಾಗೇಂದ್ರ ಪ್ರಸಾದ್, ಗೌಸ್ ಫಿರ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು