ಬಹುತೇಕ ಹೊಸ ಪ್ರತಿಭೆಗಳಿಂದ ಕೂಡಿರುವ ‘ಮಾಯಾವಿ’ ಚಿತ್ರ ತೆರೆಗೆ ಬರಲು ಸಿದ್ದವಾಗುತ್ತಿದೆ. ಚಿತ್ರದ ಟ್ರೇಲರ್ ಮತ್ತು ಹಾಡುಗಳು ಇತ್ತೀಚೆಗೆ ಬಿಡುಗಡೆಗೊಂಡಿವೆ. ಶಂಕರ್ ಜಿ. ನಿರ್ದೇಶನವಿದೆ.

‘ಇದೊಂದು ಸಸ್ಪೆನ್ಸ್-ಕ್ರೈಂ ಥ್ರಿಲ್ಲರ್ ಕಥಾಹಂದರದ ಸಿನಿಮಾ. ಸಿನಿಮಾದ ಕೊನೆಯಲ್ಲೊಂದು ಸಂದೇಶವಿದೆ. ಎಲ್ಲಾ ಥರದ ಪ್ರೇಕ್ಷಕರಿಗೂ ಇಷ್ಟವಾಗುವಂಥ ಸಿನಿಮಾ ಮಾಡಿದ್ದೇವೆ. ಲವ್, ಸೆಂಟಿಮೆಂಟ್, ಆ್ಯಕ್ಷನ್ ಹೀಗೆ ಎಲ್ಲಾ ಥರದ ಎಲಿಮೆಂಟ್ಸ್ ಈ ಸಿನಿಮಾದಲ್ಲಿವೆ. ಚಿತ್ರದುರ್ಗ, ಬೆಂಗಳೂರು, ಹೊಸಪೇಟೆ ಸುತ್ತಮುತ್ತ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಸೆನ್ಸಾರ್ನಿಂದ ಸಿನಿಮಾಕ್ಕೆ ‘ಯು’ ಸರ್ಟಿಫಿಕೇಟ್ ಸಿಕ್ಕಿದೆ’ ಎಂದು ಮಾಹಿತಿ ನೀಡಿದರು ನಿರ್ದೇಶಕರು.

ರಘುರಾಮ್ಗೆ ನಿಶ್ಚಿತಾ ಶೆಟ್ಟಿ ನಾಯಕಿ. ಉಳಿದಂತೆ ಹಿರಿಯ ನಟ ಎಂ. ಕೆ. ಮಠ, ಸೂರ್ಯ ಪ್ರವೀಣ್, ಸುರೇಶ ಬಾಬು, ಅನುರಾಧಾ, ಶಿಲ್ಪಾ, ಖುಷಿ ಗೌಡ ಮತ್ತಿತರರು ‘ಮಾಯಾವಿ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ‘ಶ್ರೀದುರ್ಗಾ ಸೆಕ್ಯುರಿಟಿ ಸರ್ವೀಸಸ್’ ಬ್ಯಾನರಿನಲ್ಲಿ ಡಾ. ಮಹಂತೇಶ್ ಹೆಚ್. ಬಂಡವಾಳ ಹೂಡಿದ್ದಾರೆ.

ಚಿತ್ರದ ಎರಡು ಹಾಡುಗಳಿಗೆ ಅಗಸ್ತ್ಯ ಸಂತೋಷ್ ಸಂಗೀತ ಸಂಯೋಜಿಸಿದ್ದು ವಿಜಯ ಪ್ರಕಾಶ್, ಮೇಘನಾ ಮತ್ತಿತರರು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಗುರುದತ್ತ ಮುಸುರಿ ಛಾಯಾಚಿತ್ರಗ್ರಹಣ, ಅನಿಲ್ ಕುಮಾರ್ ಸಂಕಲನ ಕಾರ್ಯ ನಿರ್ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.