ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ಕೌಶಿಕ್ ನಿಧನಕ್ಕೂ ಮುನ್ನ ಪಾರ್ಟಿ ಮಾಡಿದ್ದ ಫಾರ್ಮ್ ಹೌಸ್‌ನಲ್ಲಿ 'ಔಷಧ' ಪತ್ತೆ

Last Updated 11 ಮಾರ್ಚ್ 2023, 10:49 IST
ಅಕ್ಷರ ಗಾತ್ರ

ನವದೆಹಲಿ: ಬಾಲಿವುಡ್‌ ನಟ ಹಾಗೂ ನಿರ್ದೇಶಕ ಸತೀಶ್‌ ಕೌಶಿಕ್‌ ಅವರು ಮೃತಪಡುವುದಕ್ಕೂ ಮುನ್ನ ಪಾರ್ಟಿಯಲ್ಲಿ ಭಾಗಿಯಾಗಿದ್ದ ದೆಹಲಿಯ ಫಾರ್ಮ್‌ ಹೌಸ್‌ನಲ್ಲಿ ಕೆಲವು ಔಷಧ ಪದಾರ್ಥಗಳು ಪತ್ತೆಯಾಗಿವೆ ಎಂದು ತನಿಖಾಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

66 ವರ್ಷದ ಸತೀಶ್‌ ಅವರು ದೆಹಲಿಯಲ್ಲಿ ಗುರುವಾರ ನಿಧನರಾಗಿದ್ದರು. ಅವರ ಸಾವಿನ ಕುರಿತು ತನಿಖೆ ನಡೆಯುತ್ತಿದೆ. ಈ ಬಗ್ಗೆ ಮಾತನಾಡಿರುವ ಹಿರಿಯ ಅಧಿಕಾರಿಯೊಬ್ಬರು, 'ಸಾವಿಗೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ. ಬಿಜ್ವಾಸನ್‌ನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಕೆಲವು ಔಷಧಗಳನ್ನು ವಶಪಡಿಸಿಕೊಂಡಿದ್ದೇವೆ. ಇಲ್ಲಿ ನಡೆದ ಪಾರ್ಟಿಯಲ್ಲಿ ಕೌಶಿಕ್‌ ಭಾಗವಹಿಸಿದ್ದರು. ಪಾರ್ಟಿಯಲ್ಲಿ ಭಾಗವಹಿಸಿದ್ದ ಅತಿಥಿಗಳ ಪಟ್ಟಿಯನ್ನೂ ತಯಾರಿಸಿಕೊಂಡಿದ್ದೇವೆ' ಎಂದು ತಿಳಿಸಿದ್ದಾರೆ.

ದೆಹಲಿಯ ದೀನ್ ದಯಾಳ್‌ ಉಪಾಧ್ಯಾಯ ಆಸ್ಪತ್ರೆಯಲ್ಲಿ ಕೌಶಿಕ್‌ ಅವರ ಶವ ಪರೀಕ್ಷೆ ನಡೆಸಲಾಗಿದೆ.

ನಟ ನಿರ್ದೇಶಕ, ಬರಹಗಾರರಾಗಿದ್ದ ಕೌಶಿಕ್‌ ಅವರು, ಮಿಸ್ಟರ್‌ ಇಂಡಿಯಾ ಚಿತ್ರದಲ್ಲಿನ 'ಕ್ಯಾಲೆಂಡರ್' ಹಾಗೂ ದೀವಾನಾ ಮಸ್ತಾನಾ ಸಿನಿಮಾದಲ್ಲಿನ 'ಪಪ್ಪು ಪೇಜರ್' ಪಾತ್ರಗಳ ಮೂಲಕ ಜನಪ್ರಿಯರಾಗಿದ್ದಾರೆ. ಅವರು ಅತ್ಯುತ್ತಮ ಹಾಸ್ಯನಟನೆಗಾಗಿ ಎರಡು ಬಾರಿ ಫಿಲ್ಮ್ ಫೇರ್ ಪ್ರಶಸ್ತಿಯನ್ನೂ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT