ಸಡಗರ ರಾಘವೇಂದ್ರ ನಿರ್ದೇಶನದ ‘After ಆಪರೇಷನ್ ಲಂಡನ್ CAFE’ ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಶೀಘ್ರದಲ್ಲೇ ಟೀಸರ್ ಬಿಡುಗಡೆಗೊಳಿಸುವುದಾಗಿ ರಾಘವೇಂದ್ರ ತಿಳಿಸಿದ್ದಾರೆ. ಮೇಘಾ ಶೆಟ್ಟಿ ಅವರ ಹುಟ್ಟಿದ ದಿನದಂದು ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ರಾಘವೇಂದ್ರ ಈ ವಿಷಯ ತಿಳಿಸಿದ್ದಾರೆ. ಚಿತ್ರತಂಡ ಬಿಡುಗಡೆಗೊಳಿಸಿರುವ ಈ ಪೋಸ್ಟರ್‌ನಲ್ಲಿ ಹಳ್ಳಿ ಹುಡುಗಿಯಾಗಿ ಲಂಗ ದಾವಣಿಯಲ್ಲಿ ಮಿಂಚುತ್ತಿದ್ದಾರೆ ಮೇಘಾ ಶೆಟ್ಟಿ.
ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ಈ ಚಿತ್ರ ಕನ್ನಡ, ಮರಾಠಿ ಮತ್ತು ಇತರ ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದಿದೆ ಚಿತ್ರತಂಡ. ಚಿತ್ರವನ್ನು ವಿಜಯ್ ಕುಮಾರ್ ಶೆಟ್ಟಿ, ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ಜಂಟಿಯಾಗಿ ನಿರ್ಮಿಸಿದ್ದಾರೆ.