ಸೈರಾ ನರಸಿಂಹರೆಡ್ಡಿ ಚಿತ್ರದ ಬಳಿಕ ಮೆಗಾಸ್ಟಾರ್ ಚಿರಂಜೀವಿ ಹೊಸ ಚಿತ್ರ ವೊಂದರಲ್ಲಿ ನಟಿಸುತ್ತಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಲ್ಲೇ ಸಿನಿಮಾ ಸೆಟ್ ಏರಿತ್ತು.ಆದರೆ, ಸಿನಿಮಾ ತಂಡದವರು ಚಿತ್ರದ ಹೆಸರನ್ನು ಪ್ರಕಟಿಸಿಲ್ಲ.

ಇದು ಚಿರಂಜೀವಿ ಅವರ 152 ನೇ ಚಿತ್ರ. ಮಿರ್ಚಿ, ಶ್ರೀಮಂತಡು, ಜನತಾ ಗ್ಯಾರೇಜ್, ಭರತ್ ಅನೇ ನೇನು ಅಂತಹ ಯಶಸ್ವಿ ಸಿನಿಮಾಗಳ ನಿರ್ದೇಶಕ ಕೊರಟಾಲ ಶಿವಾ ಈ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೇ ಮೊದಲಬಾರಿಗೆ ಚಿರಂಜೀವಿ ಸಿನಿಮಾಕ್ಕೆ ಅವರು ನಿರ್ದೇಶನ ಮಾಡುತ್ತಿದ್ದಾರಂತೆ.

ರಾಮ್‌ಚರಣ್ ತೇಜ ಚಿತ್ರನಿರ್ಮಾಣ ಮಾಡುತ್ತಿದ್ದು, ಅವರೊಂದಿಗೆ ನಿರಂಜನರೆಡ್ಡಿ ಸಹ ನಿರ್ಮಾಪಕರಾಗಿದ್ದಾರೆ. ದೇವಿಶ್ರೀ ಪ್ರಸಾದ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಚಿರಂಜೀವಿಗೆ ನಾಯಕಿಯಾಗಿ ತ್ರಿಷಾ ಕೃಷ್ಣನ್ ನಟಿಸುತ್ತಿದ್ದಾರೆ. ಆಗಸ್ಟ್ ತಿಂಗಳಲ್ಲಿ ಸಿನಿಮಾ ತೆರೆಗೆ ಬರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದೆ. ಆದರೆ, ಸಿನಿಮಾ ತಂಡ ಅಧಿಕೃತ ದಿನಾಂಕವನ್ನು ಪ್ರಕಟಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.