ಗ್ಲ್ಯಾಮರಸ್ ಪಾತ್ರಗಳಿಗೆ ಬಣ್ಣಹಚ್ಚಿದ್ದ ನಟಿ ಮೇಘನಾ ಗಾಂವ್ಕರ್, ‘ಶಿವಾಜಿ ಸುರತ್ಕಲ್’ ಸಿನಿಮಾದ ಎರಡನೇ ಭಾಗದಲ್ಲಿ ಪೊಲೀಸ್ ಅಧಿಕಾರಿ ಪಾತ್ರಕ್ಕೆ ಬಣ್ಣಹಚ್ಚಲಿದ್ದಾರೆ ಎಂದು ತಂಡ ಈ ಹಿಂದೆಯೇ ಘೋಷಿಸಿತ್ತು. ಇದೀಗ ಸಿನಿಮಾದಲ್ಲಿನ ಅವರ ಲುಕ್ ರಿವೀಲ್ ಆಗಿದೆ.

2020ರಲ್ಲಿ ತೆರೆ ಕಂಡ, ನಟ ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್’ ಚಿತ್ರದ ಮುಂದಿನ ಸರಣಿ, ‘ಶಿವಾಜಿ ಸುರತ್ಕಲ್-2’. ಈ ಚಿತ್ರದಲ್ಲಿ ದಕ್ಷ ಪೊಲೀಸ್ ಅಧಿಕಾರಿಯಾಗಿ ಮೇಘನಾ ಕಾಣಿಸಿಕೊಳ್ಳುತ್ತಿದ್ದಾರೆ.ಡಿಸಿಪಿ ಹುದ್ದೆಯಲ್ಲಿರುವ ಯುವ ಐಪಿಎಸ್ ಅಧಿಕಾರಿ ‘ದೀಪ ಕಾಮತ್’ ಎಂಬ ಪಾತ್ರದಲ್ಲಿ ಮೇಘನಾ ನಟಿಸುತ್ತಿದ್ದಾರೆ. ಯುವ ಮಹಿಳಾ ಪೊಲೀಸ್ ಅಧಿಕಾರಿಗಳ ಬಗ್ಗೆ ವಿವರವಾಗಿ ಅಧ್ಯಯನ ನಡೆಸಿ ನಿರ್ದೇಶಕ ಆಕಾಶ್ ಶ್ರೀವತ್ಸ ಈ ಪಾತ್ರವನ್ನು ಸೃಷ್ಟಿಸಿದ್ದಾರೆ. ವಿಶೇಷವೇನೆಂದರೆ ನಿಜ ಜೀವನದಲ್ಲಿ ಮೇಘನಾ ಅವರ ತಂದೆ ಪೊಲೀಸ್ ಅಧಿಕಾರಿಯಾಗಿದ್ದವರು. ಚಿತ್ರದಲ್ಲಿ ಶಿವಾಜಿಯ ಮೇಲಧಿಕಾರಿಯ ಪಾತ್ರದಲ್ಲಿ ಮೇಘನಾ ನಟಿಸುತ್ತಿದ್ದಾರೆ.

#BoycottBrahmastra | ರಣಬೀರ್–ಆಲಿಯಾ ಸಿನಿಮಾಗೆ ಬಹಿಷ್ಕಾರದ ಬಿಸಿ

ರಮೇಶ್ ಅರವಿಂದ್ ಅವರ ಜನ್ಮದಿನವಾದ ಸೆಪ್ಟೆಂಬರ್ 10ರಂದು ಚಿತ್ರದ ಟೀಸರ್ ಬಿಡುಗಡೆ ಮಾಡಲುಚಿತ್ರತಂಡವು ತಯಾರಿ ನಡೆಸುತ್ತಿದೆ. ಚಿತ್ರದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಡಬ್ಬಿಂಗ್ ಕೆಲಸ ಆರಂಭವಾಗಿದೆ. ಚಿತ್ರಕ್ಕೆ ಜೂಡ ಸ್ಯಾಂಡಿಯವರ ಸಂಗೀತ ನಿರ್ದೇಶನವಿದ್ದು, ದರ್ಶನ್ ಅಂಬಟ್, ಗುರು ಪ್ರಸಾದ್ ಎಂ. ಜಿ. ಛಾಯಾಗ್ರಹಣವಿದೆ. ಅಂಜನಾದ್ರಿ ಸಿನಿ ಕ್ರಿಯೇಶನ್ಸ್‌ನಲ್ಲಿ ರೇಖಾ ಕೆ.ಎನ್ ಮತ್ತು ಅನುಪ್ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಆಕಾಶ್ ಶ್ರೀವತ್ಸ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.